ಭಾರತೀಯ ನೌಕಾನೆಲೆ ಹಾಗೂ ಹೊರಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ನೀರು ನಿಂತು ಮನೆಗಳಿಗೆ ನುಗ್ಗುತ್ತಿರುವುದನ್ನು ಅರಿತ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಆ ಭಾಗದಲ್ಲಿ 12 ಮೀ ಅಗಲದ ಕಾಲುವೆ ನಿರ್ಮಿಸಲು ಸೂಚಿಸಿದ್ದಾರೆ. ಅದರಂತೆ ಕಾಲುವೆ ನಿರ್ಮಾಣದ ಕೆಲಸ ಶುರುವಾಗಿದೆ.
ಈ ಬಗ್ಗೆ ಮಾತನಾಡಿದ ಮಂಕಾಳು ವೈದ್ಯ `ಇಷ್ಟು ವರ್ಷಗಳಿಂದ ಇಲ್ಲಿ ನೀರು ನುಗ್ಗುವ ಸಮಸ್ಯೆ ಇತ್ತು. ನೌಕಾನೆಲೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಇದಕ್ಕೆ ಪರಿಹಾರ ಒದಗಿಸಲಾಗಿದೆ. ಜನ ಆತಂಕ ಪಡುವ ಅಗತ್ಯವಿಲ್ಲ’ ಎಂದು ಹೇಳಿದರು.
ಶಾಸಕ ಸತೀಶ್ ಸೈಲ್ ಮಾತನಾಡಿ `ಘಟ್ಟದ ನೀರು ಸಮುದ್ರ ಸೇರಲು ಅಗತ್ಯವಿರುವ ಎಲ್ಲಾ ಕ್ರಮ ಜರುಗಿಸಲಾಗಿದೆ. ಸ್ಥಳೀಯರಿಗೂ ಈ ಬಗ್ಗೆ ಮನವರಿಕೆ ಮಾಡಲಾಗಿದೆ’ ಎಂದರು. `ಪ್ರತಿ ವರ್ಷ ಕಾಲುವೆ ಸ್ವಚ್ಛ ಮಾಡಬೇಕು. ನೀರು ನಿಲ್ಲದಂತೆ ಎಚ್ಚರವಹಿಸಬೇಕು’ ಎಂದು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.
ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಾಗೂ ಶಾಸಕ ಸತೀಶ್ ಸೈಲ್ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..
Discussion about this post