ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ಸಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ 9 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 33 ಮಂದಿ ಗಾಯಗೊಂಡಿದ್ದಾರೆ.
ಶಿವ ಖೋರಿ ದೇವಸ್ಥಾನದಿಂದ ಕತ್ರಾ ಮಾರ್ಗವಾಗಿ ಬಸ್ ತೆರಳುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಚಲಿಸುತ್ತಿದ್ದ ವೇಳೆಯೇ ದಾಳಿ ನಡೆಸಿದ ಪರಿಮಾಣ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಆಳವಾದ ಕಮರಿಗೆ ಬಿದ್ದಿದೆ.
Discussion about this post