ಅಂಕೋಲಾ ತಾಲೂಕಿನ ಶಿರೂರು ಸಮೀಪ ಸಂಭವಿಸಿದ್ದ ಗುಡ್ಡ ಕುಸಿತ ಪ್ರದೇಶದಲ್ಲಿ ರಸ್ತೆಯ ಮೇಲಿದ್ದ ಮಣ್ಣು ತೆರವು ಕಾರ್ಯಾಚರಣೆಯ ಒಂದು ಭಾಗ ಮುಗಿದಿದೆ. ಆದರೆ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ಇಲ್ಲ. ಗುಡ್ಡ ಬಿದ್ದ ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಪ್ರಸ್ತುತ ಇನ್ನೊಂದು ಭಾಗದಲ್ಲಿರುವ ಮಣ್ಣನ್ನು ಸಂಪೂರ್ಣ ತೆರವುಗೊಳಿಸಿ ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡಲು ಜಿಲ್ಲಾಡಳಿತ ಶ್ರಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದರು.
`ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್’ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್ ನ್ನು ಹೆಚ್,ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದೆ’ ಎಂದರು.





Discussion about this post