ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆಗಮಿಸಿದ್ದಾರೆ.
ಮಣ್ಣಿನ ರಾಡಿಯಲ್ಲಿ ಸಂಚರಿಸಿದ ಅವರು ಅಲ್ಲಿನ ಅವಾಂತರಗಳನ್ನು ನೋಡಿ ಆಘಾತ ವ್ಯಕ್ತಪಡಿಸಿದರು. ಅವಘಡದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾರ್ಯಾಚರಣೆಯ ಹಂತಗಳನ್ನು ಪರಿಶೀಲಿಸಿದರು. ಇನ್ನಷ್ಟು ಗುಡ್ಡ ಕುಸಿಯುವ ಸಾಧ್ಯತೆಗಳನ್ನು ಪರಿಶೀಲಿಸಿ ಆತಂಕ ವ್ಯಕ್ತಪಡಿಸಿದರು. ಸಾವನಪ್ಪಿದವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಅವರ ಜೊತೆಗಿದ್ದು, ಈ ಭಾಗದ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು. ಐ ಆರ್ ಬಿ ನಡೆಸಿದ ಅವೈಜ್ಞಾನಿಕ ಕಾಮಗಾರಿಯೇ ಈ ಅವಾಂತರಗಳಿಗೆ ಕಾರಣ ಎಂದು ಜನ ದೂರಿದರು.
ಅವ್ಯವಸ್ಥೆಯ ಹೆದ್ದಾರಿಯಲ್ಲಿ ಎಚ್ ಡಿ ಕುಮಾರಸ್ವಾಮಿ ಸಂಚರಿಸಿದ ವಿಡಿಯೋ ಇಲ್ಲಿ ನೋಡಿ..




Discussion about this post