ನೆರೆ ಪ್ರವಾಹ, ಗುಡ್ಡ ಕುಸಿತ, ವ್ಯಾಪಕ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲನೆಗಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಅನೇಕರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು. ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣವಾಗದೇ ಟೋಲ್ ಸಂಗ್ರಹ ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. 2016ಕ್ಕೆ ಮುಗಿಯಬೇಕಿದ್ದ ಕಾಮಗಾರಿ ಈವರೆಗೂ ಮುಗಿಯದ ಬಗ್ಗೆ ಕಾರಣ ಕೇಳಿದರು. ಕಾಮಗಾರಿಯ ಕುರಿತು ಕೇಂದ್ರ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿರುವುದನ್ನು ಅರಿತು ಗರಂ ಆದರು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ಪತ್ರ ಬರೆಯುವುದಾಗಿ ಹೇಳಿದರು.
ಜಿಯಾಜಿಕಲ್ ಸರ್ವೇ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಮಳೆಯಿಂದ ವಿದ್ಯುತ್ ಹಾನಿಯಾದ ಬಗ್ಗೆ ದೂರು ಕೇಳಿಬಂದಿದ್ದು, ತಕ್ಷಣ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. `ವಿದ್ಯುತ್ ಉತ್ಪಾದಿಸುವ ಜಿಲ್ಲೆಯಲ್ಲಿ ಈ ರೀತಿ ಸಮಸ್ಯೆ ಬರಬಾರದು. ಅಧಿಕಾರಿಗಳು ಸದಾ ಅಲರ್ಟ ಆಗಿರಬೇಕು. ಜನರ ನೋವಿಗೆ ತಕ್ಷಣ ಸ್ಪಂದಿಸಬೇಕು’ ಎಂದು ಸೂಚಿಸಿದರು.
`ಜಿಲ್ಲೆಯಲ್ಲಿ ಇನ್ನಷ್ಟು ಮಳೆ ಸಾಧ್ಯತೆಯಿದ್ದು, ಅಪಾಯ ಆಗದಂತೆ ಮುನ್ನಚ್ಚರಿಕೆವಹಿಸಬೇಕು. ಅಪಾಯಕಾರಿ ಪ್ರದೇಶದಲ್ಲಿ ಗ್ರಾಮ ಮಟ್ಟದ ಟಾಸ್ಕ ಫೋರ್ಸ ಸಮಿತಿ ರಚಿಸಿ, ಮುಂದಿನ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಸರ್ಕಾರದ ಮೇಲೆ ವಿಶ್ವಾಸ ಬರುವಂತೆ ನೋಡಿಕೊಳ್ಳಬೇಕು’ ಎಂದರು.
ಮುಖ್ಯಮoತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯ ವಿಡಿಯೋ ಇಲ್ಲಿ ನೋಡಿ..
Discussion about this post