6 Skip to content

ವಾಲ್ಮಿಕಿ ಹಗರಣ: ಕೇಂದ್ರ ಸರ್ಕಾರದ ಮಧ್ಯಸ್ಥಿಕೆಗೆ ಸಂಸದ ಕಾಗೇರಿ ಆಗ್ರಹ

ಶಿರಸಿ: `ರಾಜ್ಯದಲ್ಲಿ ನಡೆದ ವಾಲ್ಮೀಕಿ ನಿಗಮದ ಹಗರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರದ ಮೇಲೆ ಒತ್ತಡ ಹಾಕಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು `ವಾಲ್ಮಿಕಿ ನಿಗಮದ ಹಣ ತೆರಿಗೆಯಿಂದ ಸಂಗ್ರಹವಾದದ್ದಾಗಿದ್ದು, ಪರಿಶಿಷ್ಟ ಸಮುದಾಯದವರಿಗಾಗಿ ಈ ಹಣ ಬಳಕೆ ಆಗಬೇಕಿತ್ತು. ಆದರೆ, ಬೇನಾಮಿ ಖಾತೆಗಳಿಗೆ ಈ ಹಣ ವರ್ಗಾವಣೆ ಮಾಡಲಾಗಿದೆ. ಇದರಿಂದ ಪರಿಶಿಷ್ಟ ಸಮುದಾಯದವರಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ’ ಎಂದು ವಿವರಿಸಿದರು.
`ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ಇಲಾಖೆ ನೋಡಿಕೊಳ್ಳುತ್ತಿದ್ದು, ಅವರಿಂದಲೇ ಆಡಳಿತ ವ್ಯವಸ್ಥೆ ದುರುಪಯೋಗ ನಡೆದಿದೆ. ಒಟ್ಟು 182 ಕೋಟಿ ರೂ ಅವ್ಯವಹಾರ ಇದಾಗಿದ್ದು, ಕರ್ನಾಟಕದಲ್ಲಿ ಅನೇಕ ಆಡಳಿತಾತ್ಮಕ ಸಮಸ್ಯೆಗಳು ತಲೆದೂರಿದೆ’ ಎಂದು ಹೇಳಿದರು.
ಲೋಕಸಭೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Leave a comment

Leave a Reply

You cannot copy content of this page