6 Skip to content

ಶರಾವತಿ ತಟದಲ್ಲಿ ಆತಂಕದ ಛಾಯೆ

ಹೊನ್ನಾವರ: ಲಿಂಗನಮಕ್ಕಿ ಜಲಾಶಯ ಭರ್ತಿಯಾಗುತ್ತಿದ್ದು, ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡಬಹುದು ಎಂದು ಅಣೆಕಟ್ಟು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಶರಾವತಿ ನದಿ ಎಡಬಲ ದಂಡೆಯ ಜನ ಆತಂಕದಲ್ಲಿದ್ದಾರೆ.
ಮಳೆಯ ಅಬ್ಬರದಿಂದ ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಇದೆ. ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819 ಅಡಿಗಳಾಗಿದ್ದು ಬುಧವಾರ ಜಲಾಶಯದ ನೀರಿನ ಮಟ್ಟ 1801.20 ಅಡಿ ಪ್ರಮಾಣದಲ್ಲಿ ನೀರು ತುಂಬಿಕೊoಡಿದೆ. ಒಳ ಹರಿವು ಸುಮಾರು 60,000 ಕ್ಯೂಸೆಕ್ಸ್’ನಷ್ಟಿದೆ.
ಹೀಗಾಗಿ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳ ಬಗ್ಗೆ ಜಾಗೃತಿವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Leave a comment

Leave a Reply

You cannot copy content of this page