ಸ್ವಾತಂತ್ರೋತ್ಸವ ಅಂಗವಾಗಿ ಆಗಸ್ಟ್ ತಿಂಗಳುಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಈ ರಿಯಾಯಿತಿ ದೊರೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಸಹ ಇದೇ ದರ.
ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ 50ರಷ್ಟು ಮಾತ್ರ ಹಣ ಪಾವತಿಸಿ ಪಡೆಯಬಹುದು. ಕನ್ನಡ ಪುಸ್ತಕ ಪ್ರಾಧಿಕಾರ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದೆ.




Discussion about this post