ಶಿರಸಿ: `ಮಳೆ ಕಾರಣದಿಂದ ರಾಜ್ಯದಲ್ಲಿ ಅಪಾರ ಹಾನಿಯಾಗಿದ್ದು, ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ನಿರ್ಲಕ್ಷ್ಯವಹಿಸಿದೆ’ ಎಂದು ಕೆಪಿಸಿಸಿ ಮಲೆನಾಡು ವಿಭಾಗದ ಚುನಾವಣಾ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಕಿಡಿಕಾರಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು `ತಕ್ಷಣ ಕೇಂದ್ರ ಸರಕಾರವು ಕರ್ನಾಟಕಕ್ಕೆ 10 ಸಾವಿರ ಕೋಟಿ ರೂ ನೆರವು ನೀಡಬೇಕು’ ಎಂದು ಒತ್ತಾಯಿಸಿದರು. `ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ದೇಶದ ಭದ್ದತೆಗೆ, ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಧಕ್ಕೆ ತರುವ ಕಾರ್ಯ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
`ಅತಿವೃಷ್ಟಿಯಿಂದ ಹಾನಿಯಾದಲ್ಲಿ ಪರಿಹಾರವನ್ನು ಕೇಂದ್ರ ಸರಕಾರ ನೀಡಬೇಕು. ಮುಂಜಾಗೃತವಾಗಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಭೂ ಕುಸಿತ, ಅತಿವೃಷ್ಟಿ, ಅತಿ ಬರಗಾಲದ ವೈಜ್ಞಾನಿಕ ಅಧ್ಯಯನ ನಡೆಸಲು ಪ್ರತಿ ವರ್ಷ 1 ಲಕ್ಷ ಕೋಟಿ ರೂ ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿದರು.
ಶಾಸಕ ಭೀಮಣ್ಣ ನಾಯ್ಕ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಭಾಗ್ಯ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ವಕ್ತಾರ ದೀಪಕ್ ದೊಡ್ಡೂರು, ಪ್ರಮುಖರಾದ ಎಸ್.ಕೆ.ಭಾಗವತ, ಅನ್ಬಾಸ ತೋನ್ಸೆ, ಎಂ.ಎಸ್.ಮೊಹಮ್ಮದ್, ಪ್ರಸನ್ನ ಶೆಟ್ಟಿ ಇತರರು ಇದ್ದರು.
Discussion about this post