ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದಿoದ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟç ಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ(ಜೆಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ಆ.9 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944 ಸಂಪರ್ಕಿಸಿ.




Discussion about this post