ಬೆoಗಳೂರು: ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು `ಬೇರೆ ಯಾವುದೇ ಪ್ರಭಾವಕ್ಕೂ ಮಣೆ ಹಾಕಬಾರದು’ ಎಂದಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, `ವಾಣಿಜ್ಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಮೇಲ್ಮನವಿ ಪ್ರಕರಣಗಳನ್ನು 3 ತಿಂಗಳೊಳಗೆ ವಿಲೇವಾರಿ ಮಾಡಬೇಕು. ವಿಳಂಬ ಮಾಡಿದರೆ ಶಿಸ್ತುಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
`ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ನಾನು ಪರಿಗಣಿಸುತ್ತೇನೆ. ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕಲ್ಲ. ಅಲ್ಲದೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಮತ್ತೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಆ ವೇಳೆಗೆ ಗುರಿ ತಲುಪಿರಬೇಕು’ ಎಂದಿದ್ದಾರೆ.
Discussion about this post