ರಾಷ್ಟ್ರೀಯ ಗೌರವ ಕಾಯ್ದೆ 1971 ಮತ್ತು ಭಾರತದ ಧ್ವಜ ಸಂಹಿತೆ 2012ರಡಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಖರೀದಿ ಎರಡೂ ನಿಷಿದ್ಧ. ಹೀಗಾಗಿ ಯಾರೂ ಪ್ಲಾಸ್ಟಿಕ್ ಧ್ವಜ ಬಳಸದಂತೆ ಪರಿಸರ ಮಾಲಿನ್ಯ ಇಲಾಖೆ ಪ್ರಕಟಿಸಿದೆ.
ಧ್ವಜಕ್ಕೆ ಇರುವ ಕಡ್ಡಿ ಸಹ ಪ್ಲಾಸ್ಟಿಕ್ ಆಗಿರಬಾರದು. ಪ್ಲಾಸ್ಟಿಕ್ ಬದಲು ಕಾಗದ ಅಥವಾ ಬಟ್ಟೆಗಳಿಂದ ತಯಾರಿಸಿದ ಬಾವುಟ ಹಾಗೂ ಮರದ ಕಡ್ಡಿ ಇರುವುದನ್ನು ಬಳಸುವಂತೆ ಸೂಚಿಸಲಾಗಿದೆ.
`ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹಾಗೂ ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದರಿಂದ ಆರೋಗ್ಯ ಹಾಳು’ ಎಂದು ಪರಿಸರ ಅಧಿಕಾರಿಗಳು ಹೇಳಿದ್ದಾರೆ.
Discussion about this post