6 Skip to content

ಶಿರೂರು ಸಂತ್ರಸ್ತರ ಪರ ನಿಂತ ಸ್ವಾಮೀಜಿ: ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಶಿರೂರು ಗುಡ್ಡ ಕುಸಿತದಿಂದ ಸಂಕಷ್ಟಕ್ಕೆ ಒಳಗಾಗಿರುವ ಸಂತ್ರಸ್ತರ ಪರ ಹೋರಾಟ ನಡೆಸುತ್ತಿರುವ ಈಡಿಗ ಮಹಾಮಂಡಳಿ ಅಧ್ಯಕ್ಷರೂ ಆಗಿರುವ ಪ್ರಣಾವನಂದ ಸ್ವಾಮೀಜಿ ನೊಂದವರಿಗೆ 1 ಕೋಟಿ ರೂ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂತ್ರಸ್ತರನ್ನು ದೆಹಲಿಗೆ ಕರೆದುಕೊಂಡು ಹೋಗಿರುವ ಅವರು ಅಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿ ವೈ ರಾಘವೇಂದ್ರ ಅವರನ್ನು ಭೇಟಿ ಮಾಡಿಸಿ ತಮ್ಮ ಬೇಡಿಕೆಗಳ ಪಟ್ಟಿ ಸಲ್ಲಿಸಿದರು. ಗುಡ್ಡ ಕುಸಿತಕ್ಕೆ ಕಾರಣವಾದ ಐ ಆರ್ ಬಿ ಕಂಪನಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಸಂತ್ರಸ್ತ ಕುಟುಂಬದವರಿಗೆ ಉದ್ಯೋಗ ಕೊಡಬೇಕು ಎಂದು ಒತ್ತಾಯಿಸಿದರು.

ಅವೈಜ್ಞಾನಿಕ ಕಾಮಗಾರಿ ವಿರುದ್ಧ ಕಿಡಿಕಾರಿದ ಸ್ವಾಮೀಜಿ ದೆಹಲಿಯ ಜಂತರ್ ಮಂತರ್ ಬಳಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಹ ಎಚ್ಚರಿಸಿದ್ದಾರೆ.

Leave a comment

Leave a Reply

You cannot copy content of this page