ಉತ್ತರ ಕನ್ನಡ ಜಿಲ್ಲೆಯಲ್ಲಿಯೇ ಹುಟ್ಟಿ ಇದೇ ಜಿಲ್ಲೆಯಲ್ಲಿ ಸಮುದ್ರ ಸೇರುವ ಕಾಳಿ ನದಿ ರೌದ್ರಾವತಾರ ಪ್ರದರ್ಶಿಸಿದೆ. ಕಾಳಿ ಸಂಗಮ ಪ್ರದೇಶದಲ್ಲಿದ್ದ ಸೇತುವೆ ಬುಧವಾರ ನಸುಕಿನಲ್ಲಿ ಕುಸಿತ ಕಂಡಿದ್ದು, ಈ ವಿಷಯ ಅರಿತ ನಾಡಿನ ದೊರೆ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದರು.
ಸಚಿವ ಮಂಕಾಳು ವೈದ್ಯ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಇನ್ನಷ್ಟು ಅಪಾಯ ಆಗದಂತೆ ಎಚ್ಚರಿಕೆವಹಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆವಹಿಸಲು ಸೂಚಿಸಿದರು.
`ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕಾರ್ಯಚರಣೆಗಾಗಿ ಸಂಬAಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಹೆಚ್ಚುವರಿಯಾಗಿ, ಸೇತುವೆಯ ಬಲವತ್ತತೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ವಿವರಿಸಿದರು.
ಸಚಿವ ಮಂಕಾಳು ವೈದ್ಯ ಸ್ಥಳಪರಿಶೀಲನೆ ನಡೆಸಿ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

Leave a comment