ಕಾರವಾರದಿಂದ ಗೋವಾಗೆ ಹಾದು ಹೋಗುವ ಹೆದ್ದಾರಿಯಲ್ಲಿ ಕಾಳಿ ನದಿ ಮೇಲೆ ನಿರ್ಮಿಸಿರುವ ಸೇತುವೆ ಕುಸಿತಗೊಂಡಿರುವುದಕ್ಕೆ ರಸ್ತೆ ನಿರ್ಮಾಣ ಸಂಸ್ಥೆ ಐ ಆರ್ ಬಿ ಕಂಪನಿಯೇ ಕಾರಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಆರೋಪಿಸಿದರು.
ಕುಸಿದ ಸೇತುವೆ ನೋಡಿದ ಅವರು `ಕಾಳಿ ನದಿಗೆ ಹೊಸ ಸೇತುವೆ ನಿರ್ಮಿಸುವ ಸಂದರ್ಭದಲ್ಲಿ ಈ ಮೊದಲು ಇದ್ದ ಸೇತುವೆ ಮೇಲಿನಿಂದಲೇ ನಿಂತು ಹೊಸ ಸೇತುವೆಯನ್ನು ನಿರ್ಮಿಸಿರುವ ಕಾರಣ ಹಳೆಯ ಸೇತುವೆ ಕುಸಿತಗೊಂಡಿದ್ದು, ಇದರಿಂದಾಗಿ ಸೇತುವೆ ಮೇಲೆ ಸಾಗುತ್ತಿದ್ದ ಲಾರಿಯು ಚಾಲಕಸಮೇತ ನೀರಿಗೆ ಬಿದ್ದಿದೆ. ಸ್ಥಳೀಯ ಮೀನುಗಾರರು, ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯ ಕೈಗೊಂಡ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಪ್ರಸ್ತುತ ಇರುವ ಇನ್ನೊಂದು ಸೇತುವೆ ಮೇಲೆ ವಾಹನ ಸಂಚಾರ ಆರಂಭಿಸಲು ಸೇತುವೆಯ ದೃಢತೆಯ ಬಗ್ಗೆ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಸುರಕ್ಷತಾ ಪ್ರಮಾಣ ಪತ್ರ ದೊರೆತ ನಂತರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು’ ಎಂದರು.
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾತನಾಡಿ, `ರಾತ್ರಿ 1.30 ಸುಮಾರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಕಂಟ್ರೋಲ್ ರೂಂ ಗೆ ಸೇತುವೆ ಕುಸಿತ ಬಗ್ಗೆ ಮಾಹಿತಿ ಬಂದ ತಕ್ಷಣ, ಕಂದಾಯ, ಪೊಲೀಸ್ ಮತ್ತು ಸ್ಥಳೀಯ ಮೀನುಗಾರ ನೆರವಿನಿಂದ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿನ ಲೋಕೋಪಯೋಗಿ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಮೀನುಗಾರಿಕಾ ರಸ್ತೆಗಳು ಸೇರಿದಂತೆ ಎಲ್ಲಾ ರಸ್ತೆಗಳ ಮೇಲಿರುವ ಸೇತುವೆಗಳ ದೃಡತೆಯ ಬಗ್ಗೆ ಪರಿಶೀಲಿಸಿ ಸುರಕ್ಷತಾ ಪ್ರಮಾಣ ಪತ್ರದ ವರದಿ ನೀಡುವಂತೆ ಸಂಬ0ದಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಅಪಾಯ ಕಂಡು ಬರುವ ಕಡೆ ಪರ್ಯಾಯ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದರು.







Discussion about this post