ಕುಮಟಾ: `ಪ್ರಕೃತಿ ವಿಕೋಪದಿಂದ ಆದ ಹಾನಿಗೆ ನೀಡುವ ಪರಿಹಾರದ ಮೊತ್ತ ಯಾವುದಕ್ಕೂ ಸಾಲುತ್ತಿಲ್ಲ. ಈ ಮೊತ್ತ ಹೆಚ್ಚಿಸಬೇಕು’ ಎಂದು ಕುಮಟಾ-ಹೊನ್ನಾವರ ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ.
ಸರ್ಕಾರಕ್ಕೆ ಪತ್ರ ರವಾನಿಸಿದ ಅವರು `ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಸರಿಪಡಿಸಬೇಕು. ಅಗ್ನಿಶಾಮಕ ಠಾಣೆಗೆ ಫೈರ್ ಇಂಜನ್ ಪೂರೈಸಬೇಕು. ಚತುಷ್ಪಥ ಕಾಮಗಾರಿಯನ್ನು ಪೂರ್ತಿಗೊಳಿಸದೇ ಟೋಲ್ ಸಂಗ್ರಹಿಸುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.
ಕುಮಟಾ ಜೆಡಿಎಸ್ ಅಧ್ಯಕ್ಷ ಸಿ.ಜಿ.ಹೆಗಡೆ, ಹೊನ್ನಾವರ ಜೆಡಿಎಸ್ ಘಟಕದ ಅಧ್ಯಕ್ಷ ಟಿ.ಪಿ.ನಾಯ್ಕ ಹಾಗು ರಾಜ್ಯ ಕಮಿಟಿಯ ಸೂರಜ್ ನಾಯ್ಕ ಈ ಬಗ್ಗೆ ತಹಶೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಪತ್ರ ರವಾನಿಸಿದರು.
Discussion about this post