ನವದೆಹಲಿ: ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಮಿತ್ರಪಕ್ಷಗಳ ಬೆಂಬಲದೊಂದಿಗೆ ರಚನೆಯಾದ ಬೆನ್ನಲ್ಲೇ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರಕ್ಕೆ ಸಂದೇಶ ರವಾನೆ ಮಾಡಿರುವ ಮೋಹನ್ ಭಾಗ್ವತ್, ಮಣಿಪುರದ ಹಿಂಸಾಚಾರ ವಿಷಯವನ್ನು ಆದ್ಯತೆಯನ್ನಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದಾರೆ.ಆರ್ ಎಸ್ಎಸ್ ಕೇಂದ್ರ ಕಚೇರಿ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಮೋಹನ್ ಭಾಗ್ವತ್, ಮಣಿಪುರ ಶಾಂತಿಗಾಗಿ ಒಂದು ವರ್ಷದಿಂದ ಎದುರು ನೋಡುತ್ತಿದೆ. ಆದ್ಯತೆಯ ಮೇರೆಗೆ ಅಲ್ಲಿನ ಹಿಂಸಾಚಾರವನ್ನು ಕೊನೆಗಾಣಿಸಲು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.
10 ವರ್ಷಗಳಿಂದ ಮಣಿಪುರ ಶಾಂತಿಯುತವಾಗಿತ್ತು. ಆದರೆ ಏಕಾಏಕಿ ಗನ್ ಸಂಸ್ಕೃತಿ ಮರಳಿ ಬಂದು ವಿಜೃಂಭಿಸಲು ಆರಂಭಿಸಿತು. ಚುನಾವಣೆಯ ಗುಂಗಿನಿಂದ ಹೊರಬಂದು ಈಗ ದೇಶ ಎದುರಿಸುತ್ತಿರುವ ಸಮಸ್ಯೆಗಳತ್ತ ಗಮನ ಹರಿಸಬೇಕು ಎಂದು ಸರ್ಕಾರ ಹಾಗೂ ವಿಪಕ್ಷಗಳೆರಡಕ್ಕೂ ಭಾಗ್ವತ್ ಸಲಹೆ ನೀಡಿದ್ದಾರೆ.
Discussion about this post