ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ.
ಆ ಪೈಕಿ 19 ಸಚಿವರು ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅತ್ಯಂತ ಗಂಭೀರವಾಗ ಆರೋಪಗಳನ್ನು ಎದುರಿಸುತ್ತಿರುವ ಸಚಿವರ ಪೈಕಿ ಇಬ್ಬರು ಭಾರತೀಯ ದಂಡ ಸಂಹಿತೆ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬAಧಿಸಿದ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶಾಂತನು ಠಾಕೂರ್ ಮತ್ತು ಶಿಕ್ಷಣ ಮತ್ತು ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ.
ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್, ಠಾಕೂರ್, ಮಜುಂದಾರ್, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ಸಚಿವ ಸುರೇಶ್ ಗೋಪಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಂ ವಿರುದ್ಧ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಿವೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಎಂಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿವೆ.
Discussion about this post