`ಗೃಹಲಕ್ಷ್ಮೀ ಯೋಜನೆಗೆ ಕೆಲ ತಾಂತ್ರಿಕ ತೊಂದರೆಗಳಿದ್ದು, ಅದನ್ನು ಬಗೆಹರಿಸಲು ಪ್ರತಿ ತಾಲೂಕಿನಲ್ಲಿಯೂ ಗ್ಯಾರಂಟಿ ಅದಾಲತ್ ನಡೆಸಲಾಗುತ್ತದೆ’ ಎಂದು ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ತಿಳಿಸಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಎಲ್ಲಾ ಯೋಜನೆಗಳು ನಿರಂತರವಾಗಿ ನಡೆಯುತ್ತಿದೆ. ಗೃಹಲಕ್ಷ್ಮೀ ಯೋಜನೆಯಡಿ ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಗ್ಯಾರಂಟಿ ಅದಾಲತ್’ನಲ್ಲಿ ಅದನ್ನು ಬಗೆಹರಿಸಲಾಗುತ್ತದೆ. ಜಿಲ್ಲೆಯಲ್ಲಿ 297 ಮಹಿಳೆಯರು ಅನಾರೋಗ್ಯಕ್ಕೆ ಒಳಗಾಗಿ ಹಾಸಿಗೆ ಹಿಡಿದಿದ್ದು, ಅವರಿಗೂ ಸಹ ಗ್ಯಾರಂಟಿ ಯೋಜನೆ ಸಿಗುವ ನಿಟ್ಟಿನಲ್ಲಿ ಹೊಸ ಅಭಿಯಾನ ನಡೆಸುತ್ತೇವೆ’ ಎಂದರು.
`ಆಗಸ್ಟ್ 15ರ ಮಧ್ಯಾಹ್ನ 3 ಘಂಟೆಗೆ ಕಾರವಾರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಕಾರ್ಯಾಲಯ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಈ ಕಚೇರಿ ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.
Discussion about this post