ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಜೊತೆ ಅವರಿಗೆ ಮಾಸಿಕ ತಲಾ 20,000ರೂ ಶಿಷ್ಯ ವೇತನವೂ ಸಿಗಲಿದೆ.
ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ. ಅಗಸ್ಟ 26 ಅರ್ಜಿ ಸಲ್ಲಿಕೆಗೆ ಕೊನೆದಿನ.
ಮಹಿಳಾ ವಿದ್ಯಾರ್ಥಿಗಳು ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು karnatakamediaacademy@gmail.com ಗೆ ಇಮೇಲ್ ಮಾಡಬಹುದು. ಅರ್ಹತಾ ಪರೀಕ್ಷೆ ನಂತರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Discussion about this post