ದಾಂಡೇಲಿ: ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಗೆ ದಾಂಡೇಲಿಯ ಜನತಾ ವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಹಳಿಯಾಳದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ವಿದ್ಯಾಲಯ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ವೇದಾಂತ್ ಶಣೈ ಪ್ರಥಮ ಸ್ಥಾನ ಪಡೆದಿದ್ದಾರೆ.
ಜೊತೆಗೆ 9ನೇ ತರಗತಿಯ ಅದ್ನಾನ್ ಅತ್ತಾರ್ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ 8ನೇ ತರಗತಿಯ ಮಿಸ್ಬಾ ಶೇಖ ಪ್ರಥಮ ಸ್ಥಾನ ಪಡೆದಿದದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.





Discussion about this post