ಬೆಂಗಳೂರು: ಕೊಲೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ವಿರುದ್ಧ ವನ್ಯಜೀವಿ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದೆ.
ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ನಾಲ್ಕು ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಅವರು ಸಾಕಿದ್ದರು. ಹೀಗಾಗಿ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಧಿಕಾರಿಗಳು ನೋಟಿಸ್ ಸಹ ಜಾರಿ ಮಾಡಿದ್ದಾರೆ.
ದರ್ಶನ್ ಅವರು 2021ರಲ್ಲಿ ಕರ್ನಾಟಕ ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿದ್ದರು. ಇದೀಗ ಮತ್ತೆ ಅವರನ್ನು ನೇಮಕ ಮಾಡಿಕೊಳ್ಳುವ ಯಾವುದೇ ಚಿಂತನೆ ಇಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವನ್ಯಜೀವಿಗೆ ತೊಂದರೆ ನೀಡಿದ ನಟ ದರ್ಶನ್

Leave a comment