6
September 29, 2026

Training | ತರಬೇತಿ ಉಚಿತ – ಉದ್ಯಮಿಯಾಗುವುದು ಖಚಿತ: ವಾಣಿಜ್ಯ ತೋಟಗಾರಿಕೆ ಮಾಡುವುದು ಹೇಗೆ?

ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಸೆಪ್ಟೆಂಬರ್ 2ನೇ ವಾರದಲ್ಲಿ ವಾಣಿಜ್ಯ ತೊಟಗಾರಿಕೆ ತರಬೇತಿ (Training) ನಡೆಯಲಿದೆ. ಆಸಕ್ತರಿಗೆ ಈ ತರಬೇತಿ ಸಂಪೂರ್ಣ ಉಚಿತ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಆ 31ಕೊನೆದಿನ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ.

ಈ ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿoದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ
ನಿರ್ದೇಶಕರು
ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್
ಹಳಿಯಾಳ
ಮೋ: 8970145354, 9483485489, 9482188780‘ಗೆ ಕರೆ ಮಾಡಿ.

Leave a Reply

Your email address will not be published. Required fields are marked *

You cannot copy content of this page