ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಪ್ರತಿಭಟಿಸಿದ್ದು, ಹಂತಕರ ವಿರುದ್ಧ ನಾಯಕರು ಕಿಡಿಕಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಾಜಿ ಶಾಸಕ ಜಿ. ಹೆಚ್.ತಿಪ್ಪಾರೆಡ್ಡಿ, `ದರ್ಶನ್ ತೆರೆ ಮೇಲೆ ಹೀರೋ ಆದರೆ ನಿಜ ಜೀವನದಲ್ಲಿ ಹೀರೋ ಅಲ್ಲ. ರೇಣುಕಾಸ್ವಾಮಿ ಅವರ ಪೋಷಕರ ನೋವನ್ನು ನಾವು ಕಡೆಗಣಿಸುವಂತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿAದ ಇಂತಹ ಘಟನೆಗಳು ನಡೆಯುತ್ತಿವೆ’ ಎಂದು ಆರೋಪಿಸಿದರು.
ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು.
Discussion about this post