ಸಂಕ್ಷಿಪ್ತ ಸುದ್ದಿಗಳ ಸಮಗ್ರ ಮಾಹಿತಿ
1. ಮಕ್ಕಳ ಹಕ್ಕು ಸದಸ್ಯರ ಜಿಲ್ಲಾ ಪ್ರವಾಸ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ ತಿಪ್ಪೇಸ್ವಾಮಿ ಕೆ.ಟಿ ಅವರು ಉತ್ತರ ಕನ್ನಡ ಜಿಲ್ಲೆಗೆ ಅಗಸ್ಟ 20ರಂದು ಭೇಟಿ ನೀಡಲಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯ ಕುಮಟಾ ತಾಲ್ಲೂಕಿನ ನಾಡಮಾಸ್ಕೇರಿ ಮತ್ತು ಅನ್ನೇಹಳ್ಳಿ ಗ್ರಾಮ ಪಂಚಾಯತಿಗಳು, ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಯಿoದ 5 ಗಂಟೆಯವರೆಗೆ ಕುಮಟಾ ತಾಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಆ 21ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳು ಶಾಲೆ ಪದವಿ ಪೂರ್ವ ಕಾಲೇಜು, ಐಟಿಐ, ಡಿಪ್ಲೋಮಾ, ಕಾಲೇಜುಗಳು, ಅಂಗನವಾಡಿ, ಪೋಲಿಸ್ ಠಾಣೆ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ 3.30 ಗಂಟೆಯಿ0ದ 5 ಗಂಟೆಯವರೆಗೆ ಜಿಲ್ಲಾ ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಪ್ರಗತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಹಿಸಲಿದ್ದಾರೆ.
2. ದಿವಿಗಿಯಲ್ಲಿ ಜನಸ್ಪಂದನಾ ಸಭೆ
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಅಗಸ್ಟ 20ರಂದು ಬೆಳಿಗ್ಗೆ 11 ಗಂಟೆಗೆ ಕುಮಟಾ ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ. ಅಹವಾಲು ಸಲ್ಲಿಸಬಹುದು.
3. ಆ 19ಕ್ಕೆ ನುಲಿಯ ಚಂದಯ್ಯ ಜಯಂತಿ
ಜಿಲ್ಲಾ ಮಟ್ಟದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ ಆ 19ರಂದು ಜಿಲ್ಲಾಧಿಕಾರಿ ಸಭಾ ಭವನದಲ್ಲಿ ನಡೆಯಲಿದೆ.
ಆ 20ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಆ 20ಕ್ಕೆ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ನಡೆಯಲಿದೆ.
25ಕ್ಕೆ ಕೃಷ್ಣ ಜಯಂತಿ
ಜಿಲ್ಲಾ ಮಟ್ಟದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಆಗಸ್ಟ 26ಕ್ಕೆ ಜಿಲ್ಲಾಧಿಕಾರಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
Discussion about this post