6
  • Latest

Govt office problems | ಜನಸ್ಪಂದನಾ ಸಭೆಯಲ್ಲಿ ದೂರುಗಳ ಸುರಿಮಳೆ: ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

Govt office problems | ಜನಸ್ಪಂದನಾ ಸಭೆಯಲ್ಲಿ ದೂರುಗಳ ಸುರಿಮಳೆ: ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವ

AchyutKumar by AchyutKumar
August 20, 2024
in ಸ್ಥಳೀಯ
advt advt advt
ADVERTISEMENT

`ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ದೂರುಗಳು ( Govt office problems  ) ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಅನಿವಾರ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.

ಮಂಗಳವಾರ ಕುಮಟಾ ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆಯಲ್ಲಿ ( Govt office problems ) ಮಾತನಾಡಿದ ಅವರು `ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಜನ ಇರುವ ಕಡೆಗಳಿಗೆ ಎಲ್ಲಾ ಅಧಿಕಾರಿಗಳೊಂದಿಗೆ ತೆರಳಿ ಸಮಸ್ಯೆ ಬಗೆಹರಿಸಬೇಕು’ ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಜಿಲ್ಲಾ ಮಟ್ಟದ 2 ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿರುವ 323 ಅರ್ಜಿಗಳಲ್ಲಿ ಎಲ್ಲಾ 323 ಅರ್ಜಿಗಳನ್ನೂ ಸಮರ್ಪಕವಾಗಿ ವಿಲೇವಾರಿ ಮಾಡಿ ಶೇ.100ರಷ್ಟು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ’ ಎಂದು ಈ ವೇಳೆ ಹೇಳಿದರು.

Advertisement. Scroll to continue reading.
ADVERTISEMENT
ADVERTISEMENT

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾತನಾಡಿ, `ಜನಸ್ಪಂದನಾ ಸಭೆಯಲ್ಲಿ ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಗಳನ್ನೂ ಸಂಬ0ಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಬೇಕು’ ಎಂದು ಸೂಚಿಸಿದರು.  ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳ ವಿರುದ್ದ ಸಾರ್ವಜನಿಕರು ಹಲವು ದೂರುಗಳನ್ನು ಸಲ್ಲಿಸಿದರು `ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಿಂದ ನೀರು ಪಾಲಾಗಿದ್ದ ಗ್ಯಾಸ್ ಟ್ಯಾಂಕರ್ ಇದ್ದ ಸೇತುವೆ ಬಳಿ ಸೂಕ್ತ ರಕ್ಷಣಾ ತಡೆಗೋಡೆ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು ಕೂಡಾ ಸ್ಪಂದಿಸುತ್ತಿಲ್ಲ, ಅತ್ಯಂತ ಅಗತ್ಯವಿರುವಡೆ ಡಿವೈಡರ್ ಓಪನ್ ಮಾಡಬೇಕು. ರಸ್ತೆ ಕಾಮಗಾರಿಯಿಂದ ಮನೆಗೆ ಮಳೆ ನೀರು ನುಗ್ಗುತ್ತಿದೆ’ ಎಂದು ಜನ ದೂರಿದರು.

Advertisement. Scroll to continue reading.

ಕುಮಟಾದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ, ರಸ್ತೆಗಳ ಅಗಲೀಕರಣ, ರಸ್ತೆಗಳಲ್ಲಿ ಗುಂಡಿಗಳನ್ನು ಸರಿಪಡಿಸುವುದು, ಕುಮಟಾ ತಾಲೂಕು ಆಡಳಿತ ಸೌಧದಲ್ಲಿ ಸ್ವಚ್ಛತೆ ಕಾಪಾಡುವುದು, ಸಬ್ ರಿಜಿಸ್ಟಾçರ್ ಕಚೇರಿಯನ್ನು ಇದೇ ಕಟ್ಟಡಕ್ಕೆ ಸ್ಥಳಾಂತರಿಸುವುದು, ತಹಸೀಲ್ದಾರ್ ನೇಮಕ , ಮಿರ್ಜಾನ್ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಯಾಣ ರಸ್ತೆ ದುರಸ್ತಿ, ಹೋಮ್ ಸ್ಟೇ ಗಳ ಲೈಸೆನ್ಸ್ ನವೀಕರಣ, ಸೌತೆಗುಳಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ, ಮೇದಿನಿ ರಸ್ತೆ ದುರಸ್ತಿ, ಚಂಡಿಕಾ ನದಿಗೆ ಸೇತುವೆ ನಿರ್ಮಾಣ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ್, ಶಾಂತಾರಾಮ ಸಿದ್ದಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ , ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

Suicide | ನೇಣಿಗೆ ಶರಣಾದ ಮಾನಸಿಕ ಅಸ್ವಸ್ಥ

Next Post

Activist | ಹೋರಾಟಗಾರರಿಗೆ ಸವಾಲು ಹಾಕಿದ ಹೋರಾಟಗಾರ!

Next Post

Activist | ಹೋರಾಟಗಾರರಿಗೆ ಸವಾಲು ಹಾಕಿದ ಹೋರಾಟಗಾರ!

Gokarna | ಗೋಕರ್ಣ ದೇಗುಲಕ್ಕೆ ನೂತನ ಸಮಿತಿ

Yakshagana | ಯಕ್ಷಶ್ರೀ: ಕೈ - ಕಾಲು ಅಲ್ಲಾಡಿಸಲು ಸಾಧ್ಯವಿಲ್ಲ.. ಆದರೂ ಯಕ್ಷವೇಷದ ಮೋಹ ಕಡಿಮೆ ಆಗಿಲ್ಲ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.