ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ಅವಧಿಯಲ್ಲಿ 44 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ( Pocso ) ನಡೆದಿದೆ. ಈ ಹಿಂದಿನ ಅಂಕಿ-ಸ0ಖ್ಯೆಗಳ ಲೆಕ್ಕಾಚಾರ ದೊರೆತರೆ ನಮ್ಮ ಮಕ್ಕಳು ಸುರಕ್ಷಿತವಾ? ಎಂಬ ಪ್ರಶ್ನೆ ಪಾಲಕರನ್ನು ಕಾಡುವುದು ಸಹಜ! S News ಡಿಜಿಟಲ್
ಪಿಯು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳೇ ಅತ್ಯಧಿಕವಾಗಿ ಲೈಂಗಿಕ ದೌರ್ಜನ್ಯಕ್ಕೆ ( Pocso ) ಸಿಲುಕಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಮಕ್ಕಳು ಮೊದಲು ಸುಮ್ಮನಿದ್ದು, ಗರ್ಭ ಧರಸಿದ ನಂತರವೇ ಬೆಳಕಿಗೆ ಬಂದ ಪ್ರಕರಣಗಳು ಸಹ ವರದಿಯಾಗಿದೆ. ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ದೌರ್ಜನ್ಯಕ್ಕೆ ಮುಖ್ಯ ಕಾರಣ ಎಂದು ಗೊತ್ತಾಗಿದೆ. ಅಂಕಿ-ಸ0ಖ್ಯೆಗಳ ಪ್ರಕಾರ ರಾಜ್ಯದಲ್ಲಿ ಶೇ 70ರಷ್ಟು ಲೈಂಗಿಕ ದೌರ್ಜನ್ಯಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ನಡೆದಿದೆ. 18 ವರ್ಷದ ಒಳಗಿನವರೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ. S News ಡಿಜಿಟಲ್

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ ತಿಪ್ಪೇಸ್ವಾಮಿ ಕೆ ಟಿ `ಪೋಕ್ಸೋ ಪ್ರಕರಣ ತಡೆಗೆ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಗತ್ಯ’ ಎಂದು ಪ್ರತಿಪಾದಿಸಿದರು. `ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ನಿಗಾವಹಿಸಬೇಕು’ ಎಂದವರು ಕರೆ ನೀಡಿದರು.
`ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವುದು ಅನಿವಾರ್ಯ. ಕಾಲೇಜುಗಳಲ್ಲಿ ಪೊಕ್ಸೋ ಕಾಯಿದೆ ಬಗ್ಗೆ ತರಬೇತಿ ಆಯೋಜಿಸಬೇಕು’ ಎಂದು ಅವರು ಸೂಚಿಸಿದ್ದಾರೆ. `ವಿದ್ಯಾರ್ಥಿಗಳಿಗೆ ಸುರಕ್ಷಿತ ರೀತಿಯಲ್ಲಿ ಮೊಬೈಲ್ ಬಳಕೆ ಮಾಡುವ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಮನೆಗಳಲ್ಲಿ ಪೋಷಕರು ಜಾಗೃತಿ ಮೂಡಿಸಬೇಕು’ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
S News ಡಿಜಿಟಲ್
Discussion about this post