ಯಲ್ಲಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್’ನಿಂದ ವಿಶ್ವದರ್ಶನ ಶಾಲೆಯಲ್ಲಿ ನಡೆದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಹುಲಗೋಡು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದರು. ಮಾಗೋಡು ಕಾಲೋನಿಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರು. ಗೈಡ್ಸ್ ವಿಭಾಗದಲ್ಲಿ ಸಹ ಹುಲಗೋಡ ಶಾಲೆಯವರು ಪ್ರಥಮ ಸ್ಥಾನ ಪಡೆದಿದ್ದು, ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದರು. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
`ವಿದ್ಯಾರ್ಥಿಗಳು ಅಂಕಗಳಿಕೆಗೆ ಮಾತ್ರ ಸೀಮಿತವಾಗಿರದೇ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆ ಉತ್ತಮ ವೇದಿಕೆ. ಮಕ್ಕಳಲ್ಲಿ ಶಿಸ್ತು ಮೂಡಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ’ ಎಂದು ಸಂಕಲ್ಪ ಸೇವಾ ಸಂಸ್ಥೆ ಅಧ್ಯಕ್ಷ ಪ್ರಮೋದ ಹೆಗಡೆ ಈ ಕಾರ್ಯಕ್ರಮದಲ್ಲಿ ಹೇಳಿದರು. ಪ ಪಂ ಅಧ್ಯಕ್ಷೆ ನರ್ಮದಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಸಿಪಿಐ ರಮೇಶ್, ಶಿಕ್ಷಣಾಧಿಕಾರಿ ಎನ್ ಆರ್ ಹೆಗಡೆ, ಪ ಪಂ ಮಾಜಿ ಅಧ್ಯಕ್ಷೆ ಭವ್ಯ ಶೆಟ್ಟಿ ಮಾತನಾಡಿದರು.
ಪ್ರಮುಖರಾದ ನರಸಿಂಹ ಕೋಣೆಮನೆ, ಅಜಯ ಭಾರತೀಯ, ಪ್ರಕಾಶ್ ತಾರಿಕೊಪ್ಪ ಪ್ರಶಾಂತ್ ಜಿ ಎನ್ ಕಾರ್ಯಕ್ರಮದಲ್ಲಿದ್ದರು. ಆಶಾ ಭಗನಗದ್ದೆ, ಪೂರ್ಣಿಮಾ ಉಪಾಧ್ಯ ನಾಗರಾಜ ಹೆಗಡೆ ಸ್ಪರ್ಧಾ ಕಾರ್ಯಕ್ರಮದ ನಿರ್ಣಾಯಕರಾಗಿದ್ದರು. ತಹಶೀಲ್ದಾರ್ ಅಶೋಕ ಭಟ್ಟ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದರು. ಸುಧಾಕರ ನಾಯ್ಕ ನಿರ್ವಹಿಸಿದರು. ಗಣೇಶ ಭಟ್ಟ ವಂದಿಸಿದರು.




