ಯಲ್ಲಾಪುರ: ಅರಣ್ಯ ಇಲಾಖೆಯ ಕಾಮಗಾರಿಗಳಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ನೀಡದಿರುವ ಬಗ್ಗೆ ಯಲ್ಲಾಪುರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದವರು ಉಪಅರಣ್ಯ ಸಂರಕ್ಷಣಾಧಿಕಾರಿ ಹರ್ಷಾಭಾನು ಅವರಿಗೆ ಮನವಿ ಸಲ್ಲಿಸಿದ್ದಾರೆ.
ಸಂಘದ ಅಧ್ಯಕ್ಷ ಸತ್ಯನ್ ಬಿ ಮಾತನಾಡಿ `ಕರ್ನಾಟಕ ಸರ್ಕಾರದ ಆದೇಶದಂತೆ ಸರ್ಕಾರದ ಕಾಮಗಾರಿಗಳಲ್ಲಿ ಶೇ 24.10ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಮೀಸಲಿರಿಸಬೇಕು. ಆದರೆ, ಅರಣ್ಯ ಇಲಾಖೆ ಈ ನಿಯಮ ಉಲ್ಲಂಘಿಸಿದೆ’ ಎಂದು ದೂರಿದರು. `ಕೂಡಲೇ ಈ ಸಮಸ್ಯೆ ಬಗೆಹರಿಸಬೇಕು’ ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಿದ ಡಿಎಫ್‌ಓ ಹರ್ಷಾಬಾನು `ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸುವೆ’ ಎಂದರು. `ಸಾಮಾಜಿಕ ನ್ಯಾಯ ಕಾಪಾಡುವ ನಿಟ್ಟಿನಲ್ಲಿ ಪ್ರಯತ್ನಿಸುವೆ’ ಎಂದು ತಿಳಿಸಿದರು.




