6
  • Latest

ಸದ್ಯಕ್ಕೆ ಇಲ್ಲ ಕೊರೊನಾ ಆತಂಕ: ಸರ್ಕಾರದಿಂದಲೇ ಮಾನವ ಸರಪಳಿ ನಿರ್ಮಾಣಕ್ಕೆ ಕರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸದ್ಯಕ್ಕೆ ಇಲ್ಲ ಕೊರೊನಾ ಆತಂಕ: ಸರ್ಕಾರದಿಂದಲೇ ಮಾನವ ಸರಪಳಿ ನಿರ್ಮಾಣಕ್ಕೆ ಕರೆ!

AchyutKumar by AchyutKumar
September 5, 2024
in ದೇಶ - ವಿದೇಶ
advt advt advt
ADVERTISEMENT

ಕಳೆದ ತಿಂಗಳಿನವರೆಗೂ ಸರ್ಕಾರದ ವಿವಿಧ ಪತ್ರ ವ್ಯವಹಾರಗಳಲ್ಲಿ `ಸಾಮಾಜಿಕ ಅಂತರ’ ಕಾಪಾಡುವಂತೆ ಸೂಚಿಸುತ್ತಿದ್ದ ಸರ್ಕಾರ ಇದೀಗ ಮಾನವ ಸರಪಳಿ ನಿರ್ಮಾಣಕ್ಕೆ ಕರೆ ನೀಡಿದ್ದು, ಕೊರೊನಾ ಆತಂಕ ದೂರವಾಗಿದೆ.

ಸೆಪ್ಟಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ಹಳಿಯಾಳ ತಾಲೂಕಿನ ಮಾವಿನಕೊಪ್ಪದಿಂದ ಭಟ್ಕಳ ತಾಲೂಕಿನ ಶಿರೂರುವರೆಗೆ 260 ಕಿಮೀ ಉದ್ದದ ಮಾನವ ಸರಪಳಿ ರಚಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಸೂಚನೆ ನೀಡಿದರು.

ADVERTISEMENT
ADVERTISEMENT

`ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಈ ಬಾರಿ ರಾಜ್ಯದಲ್ಲಿ ಬೀದರ್’ದಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ ನಿರ್ಮಿಸಲಾಗುವ ಮಾನವ ಸರಪಳಿಯನ್ನು ಜಿಲ್ಲೆಯ ಗಡಿ ತಾಲೂಕಾದ ಹಳಿಯಾಳದಿಂದ ಸೇರ್ಪಡೆ ಮಾಡಿಕೊಂಡು ಯಲ್ಲಾಪುರ, ಶಿರಸಿ, ಕುಮಟಾ, ಹೊನ್ನಾವರ ಮತ್ತು ಭಟ್ಕಳದ ಶಿರೂರುವರೆಗೆ ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ನೌಕರರ ಮೂಲಕ 260 ಕಿಮೀ ದೂರದವರೆಗೆ ಮಾನವ ಸರಪಳಿ ರಚಿಸಲು ಸೂಕ್ತ ಯೋಜನೆ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು’ ಎಂದವರು ತಿಳಿಸಿದರು.

Advertisement. Scroll to continue reading.

`ಜಿಲ್ಲೆಯಲ್ಲಿ ಈ ಮಾನವ ಸರಪಳಿ ರಚನೆ ಕಾರ್ಯಕ್ರಮಕ್ಕೆ ಪ್ರತೀ ಕಿಮೀ 500ರಿಂದ 600 ಜನ ಭಾಗವಹಿಸಬೇಕಾದ ಅಗತ್ಯವಿದ್ದು, ಒಟ್ಟು ಸುಮಾರು 1.5 ಲಕ್ಷ ಜನರನ್ನು ಈ ಕಾರ್ಯಕ್ರಮದಲ್ಲಿ ಭಾಗಿಗಳನ್ನಾಗಿ ಮಾಡಬೇಕಿದೆ. ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಪಿಡಿಓ ಮತ್ತು ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರ ಸಹಕಾರ ಪಡೆಯಬೇಕು’ ಎಂದು ತಿಳಿಸಿದರು. ಯಾವುದೇ ಹಂತದಲ್ಲೂ ಈ ಸರಪಳಿ ತುಂಡಾಗದAತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿನ ಎಲ್ಲಾ ಹಾಸ್ಟೆಲ್ `ವಿದ್ಯಾರ್ಥಿಗಳು ಕೂಡಾ ಈ ಸರಪಳಿಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಸರಪಳಿ ರಚನೆಗೆ ಜನಸಂಖ್ಯೆ ಕೊರತೆಯಾಗುವ ಪ್ರದೇಶಗಳಿಗೆ ಹೆಚ್ಚುವರಿ ಇರುವ ಪ್ರದೇಶಗಳಿಂದ ಸಾರಿಗೆ ವ್ಯವಸ್ಥೆ ಮೂಲಕ ತಲುಪಿಸುವ ಕಾರ್ಯ ಮಾಡಬೇಕು. ಈ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗಾಗಿ ಸವಿವರವಾದ ಸೂಕ್ತ ಯೋಜನೆಯನ್ನು ತಯಾರಿಸಬೇಕು’ ಎಂದರು.

Advertisement. Scroll to continue reading.

`ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆವತಿಯಿಂದ ಅಗತ್ಯ ಭದ್ರತೆ ಮತ್ತು ಸಂಚಾರ ಸುರಕ್ಷತೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಇಲಾಖೆಗಳು ತಮ್ಮ ಸಂಪೂರ್ಣ ಸಹಕಾರ ನೀಡುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿ ಹಾಗೂ ಮಾದರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು’ ಎಂದರು.

 

 

ShareSendTweetShare
ADVERTISEMENT
Previous Post

ಪುರಸ್ಕಾರಕ್ಕೂ ಬೇಕು ರಾಜಕೀಯ ಲಾಭಿ: ಅರ್ಜಿ ಹಾಕಿ ಅಲೆದಾಡಿದವರಿಗೆ ಮಾತ್ರ ಶಿಕ್ಷಕ ಪ್ರಶಸ್ತಿ!

Next Post

ಹುಲಗೋಡು ಸರ್ಕಾರಿ ಶಾಲೆ: ಜಿಲ್ಲಾ ಮಟ್ಟದಲ್ಲಿಯೂ ಮಕ್ಕಳ ಸಾಧನೆ

Next Post

ಹುಲಗೋಡು ಸರ್ಕಾರಿ ಶಾಲೆ: ಜಿಲ್ಲಾ ಮಟ್ಟದಲ್ಲಿಯೂ ಮಕ್ಕಳ ಸಾಧನೆ

ಒಂದು ಮೊಟ್ಟೆಯ ಕಥೆ: ಶಿಕ್ಷಕರ ದಿನದಂದೇ ಸಿಕ್ಕಿಬಿದ್ದ ಶಿಕ್ಷಕಿ!

ನಾಲೆಯಲ್ಲಿ ಹರಿದುಬಂದ ಅಪರಚಿತನ ಶವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.