ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ನಟ ದರ್ಶನ್ ಯಾರಿಗೂ ಕಾಣದಂತೆ ಶಾಮಿಯಾನ ಹಾಗೂ ಪರದೆ ಹಾಕಲಾಗಿದೆ. ಜೊತೆಗೆ ಪೊಲೀಸ್ ಠಾಣೆಯ ಸುತ್ತ ಸೆ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದರ್ಶನ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ, ಘೋಷಣೆ ಕೂಗಿದ್ದರಿಂದ ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಈ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಠಾಣೆ ಸುತ್ತ ಶಾಮಿಯಾನದ ಪರದೆ ಹಾಕಿರುವುದು ಮತ್ತು ಠಾಣೆಯ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿರುವುದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Discussion about this post