ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದಲ್ಲಿ ಕೆಲಸ ಮಾಡಲು ಅರ್ಹರ ಹುಡುಕಾಟ ನಡೆದಿದೆ.
ಹೊನ್ನಾವರ ತಾಲೂಕಿನ ಮಂಕಿ ಬಿ ಅನಂತವಾಡಿ ಗ್ರಾ.ಪಂ. (ಪರಿಶಿಷ್ಟ ಜಾತಿ) ಮಾಗೋಡ ಗ್ರಾ.ಪಂ. (ಪ್ರವರ್ಗII B ) ಕೆಳಗಿನೂರು ಗ್ರಾ.ಪಂ. (ಸಾಮಾನ್ಯ, – ಸಮತಳ ಮೀಸಲಾತಿ ಅಂಗವಿಕಲ), ಶಿರಸಿ ತಾಲೂಕಿನ ನೆಗ್ಗು ಗ್ರಾ.ಪಂ. (ಪ್ರವರ್ಗII B) , ಸಮತಳ ಮೀಸಲಾತಿ ಮಹಿಳೆ), ಕುಮಟಾ ತಾಲೂಕಿನ ಹನೇಹಳ್ಳಿ ಗ್ರಾ.ಪಂ. ಸಾಮಾನ್ಯ, ಸಮತಳ ಮೀಸಲಾತಿ ಗ್ರಾಮೀಣ) ಅಭ್ಯರ್ಥಿಯಾಗಳಿಗೆ ಅವಕಾಶ ನೀಡಲಾಗಿದೆ.
ಅಭ್ಯರ್ಥಿಯು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಪಿಕೇಷನ್ ಕೋರ್ಸ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿ0ದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ ಮಾಡಿರಬೇಕು. ಕೆಳಗಿನೂರು, ನೆಗ್ಗು ಮತ್ತು ಹನೇಹಳ್ಳಿಯಲ್ಲಿ ಅರ್ಜಿ ಸಲ್ಲಿಸುವವರು ಅದೇ ಗ್ರಾಮ ಪಂಚಾಯತ ವ್ಯಾಪ್ತಿಯ ನಿವಾಸಿಯಾಗಿರಬೇಕು ಎಂಬ ನಿಯಮವಿದೆ. ಮಂಕಿ ಬಿ ಅನಂತವಾಡಿ ಹಾಗೂ ಮಾಗೋಡ ಗ್ರಾಮ ಪಂಚಾಯತ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ನಿಗದಿ ಪಡಿಸಿದ ಮೀಸಲಾತಿಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆಯಾ ತಾಲೂಕಿನ ಬೇರೆ ಗ್ರಾಮ ಪಂಚಾಯತಿಗೆ ಒಳಪಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ : ಕನಿಷ್ಠ 18 ವರ್ಷ ಗರಿಷ್ಠ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು. ಅಲ್ಲದೇ ವಿಧವೆಯರು, ಮಾಜಿ ಸೈನಿಕರು ಮುಂತಾದ ವರ್ಗದವರಿಗೆ ಸರ್ಕಾರವು ಕಾಲ ಕಾಲಕ್ಕೆ ನಿಗದಿಪಡಿಸುವ ಗರಿಷ್ಠ ವಯೋಮಿತಿಯನ್ನು ಕಲ್ಪಿಸಲಾಗುವುದು. ಅರ್ಜಿ ನಮೂನೆಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ ಕಛೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕಛೇರಿಗೆ ಸೆ.30 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಛೇರಿಗೆ ಸಂಪರ್ಕಿಸುವ0ತೆ ಗ್ರಾ.ಪಂ. ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
ಹೈನುಗಾರಿಕೆ ಜೊತೆ ಎರೆಹುಳು ಗೊಬ್ಬರ ತಯಾರಿಕೆ: ಉಚಿತ ತರಬೇತಿ
ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ ಹಾಗೂ ಎರೆಹುಳು ಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಯು ಸೆ 24 ರಿಂದ ಆಯೋಜಿಸಲಾಗಿದೆ. ಇದಕ್ಕೆ ಗ್ರಾಮೀಣ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವೂ ಸಿಗಲಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಿ.
ಜಿಮ್ ಸ್ಥಾಪನೆಗೆ ಅರ್ಜಿ ಅಹ್ವಾನ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ವಿವರಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸೆ.23 ರೊಳಗಾಗಿ ಅರ್ಜಿಗಳನ್ನು ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08382-201824 ಹಾಗೂ ಮೊಬೈಲ್ ಸಂಖ್ಯೆ: 9480886551 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವoತೆ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.