ಯಲ್ಲಾಪುರ: ತಾಲೂಕಿನ ಮೂರು ಪ್ರಸಿದ್ಧ ಜಲಪಾತಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡುವಂತೆ ಉತ್ತರ ಕನ್ನಡ ಜಿಲ್ಲಾಡಳಿತ ಯಲ್ಲಾಪುರ ಅರಣ್ಯ ಇಲಾಖೆಗೆ ಸೂಚನೆ ನೀಡಿದೆ.
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಪ್ರವಾಸೋದ್ಯಮ ಇಲಾಖೆ ಯಲ್ಲಾಪುರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದೆ. ಮಳೆಗಾಲ ಮುಗಿಯುವ ಹಂತದಲ್ಲಿರುವುದರಿoದ ಜಿಲ್ಲೆಗೆ ಸಾಕಷ್ಟು ಪ್ರವಾಸಿಗರ ಆಗಮನವಾಗುತ್ತಿದೆ. ಈ ನಿಟ್ಟಿನಲ್ಲಿ ಯಲ್ಲಾಪುರ ತಾಲೂಕಿನ ಮಾಗೋಡು, ಶಿರಲೆ ಹಾಗೂ ಸಾತೊಡ್ಡಿ ಜಲಪಾತಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನಲೆ ಈ ಮೂರು ಜಲಪಾತಗಳ ವ್ಯಾಪ್ತಿಯಲ್ಲಿ ಸುರಕ್ಷತಾ ಕ್ರಮ ಜರುಗಿಸಿ ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸೂಚಿಸಿದೆ.
ಇದನ್ನೂ ಓದಿ: ಪ್ರವಾಸೋದ್ಯಮ ಚಟುವಟಿಕೆಗೆ ಅರಣ್ಯ ಇಲಾಖೆ ಅಡ್ಡಗಾಲು
ಪ್ರವಾಸೋದ್ಯಮಕ್ಕೆ ಕುಂಟಿತವಾಗುತ್ತಿರುವ ಬಗ್ಗೆ ಅಗಸ್ಟ 24ರಂದು S News Digitel ವರದಿ ಪ್ರಸಾರ ಮಾಡಿ ಜಿಲ್ಲಾಡಳಿತದ ಗಮನ ಸೆಳೆದಿತ್ತು.




