6
  • Latest

ಜನ ವಿರೋಧದ ನಡುವೆಯೂ ಕಸ್ತೂರಿ ರಂಗನ್ ಜಾರಿ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜನ ವಿರೋಧದ ನಡುವೆಯೂ ಕಸ್ತೂರಿ ರಂಗನ್ ಜಾರಿ!

AchyutKumar by AchyutKumar
in ದೇಶ - ವಿದೇಶ

ಉತ್ತರ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದ ಕಸ್ತೂರಿ ರಂಗನ್ ವರದಿ ಜಾರಿಗೆ ಸಮ್ಮತಿ ದೊರೆತಿದೆ.

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಕೆಲ ನಿಬಂಧನೆಗಳನ್ನ ಹಾಕುವ ಮೂಲಕ ಸಮ್ಮತಿ ನೀಡಲಾಗಿದೆ. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ 2ರಂದು 6ನೇ ಅಧಿಸೂಚನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದ್ದು, 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ನಡೆದಿದೆ.

`ಕರ್ನಾಟಕದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. `ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೇ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ತಿಳಿಸಿದ್ದಾರೆ.

`ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದ್ದು, ಹೀಗಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು’ ಎಂದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 704 ಹಳ್ಳಿಗಳು

ಕಸ್ತೂರಿ ರಂಗನ್ ವರದಿಯಲ್ಲಿ ಜಿಲ್ಲೆಯ 6998 ಚ.ಕಿ.ಮೀ ಪ್ರದೇಶದಲ್ಲಿನ 9 ತಾಲೂಕುಗಳ 704 ಹಳ್ಳಿಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ ಸೇರ್ಪಡೆಯಾಗಿದ್ದು, ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮುಂದೆ ಜಿಲ್ಲೆಯಲ್ಲಿ ಜನರು ಎದುರಿಸಬೇಕಾದ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.

ShareSendTweetShare
Previous Post

ಹುಡುಗಿ ಚುಡಾಯಿಸಿ ಸಿಕ್ಕಿಬಿದ್ದ ಬ್ಯಾಟರಿ ಕಳ್ಳರು!

Next Post

ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನಗಳೇನು?

Next Post

ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ಆಗುವ ಪ್ರಯೋಜನಗಳೇನು?

ಹೆಬ್ಬಾರ್ ಸ್ವಕ್ಷೇತ್ರದಲ್ಲಿ ರೂಪಾಲಿ ಸಂಚಾರ: ಅಧಿಕಾರ ಇಲ್ಲದಿದ್ದರೂ ಕಡಿಮೆಯಾಗದ ಅಬ್ಬರ!

ಈಶ್ವರ ಸನ್ನಿಧಿಯಲ್ಲಿ ವಾಮಾಚಾರ: ದೇವರ ಭೂಮಿ ಮೇಲೆ ದುಷ್ಟರ ಕಣ್ಣು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.