6

ಬಂಗಾರ ಗೆದ್ದ ಸುಪ್ರಜಾ

ಕಾರವಾರ: ಜನಪರ ಹಾಗೂ ಸ್ನೇಹಪರ ವ್ಯಕ್ತಿತ್ವದ ಕಂದಾಯ ಅಧಿಕಾರಿ ಪರಶುರಾಮ ನಾಯಿಕ ಅವರ ಪುತ್ರಿ ಸುಪ್ರಜಾ ನಾಯಿಕ ಅವರಿಗೆ ಬಂಗಾರದ ಪದಕ ದೊರೆತಿದೆ. ಗದಗದ ಕನಕದಾಸ ಶಿಕ್ಷಣ ಸಮಿತಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂ.ಎ. ಸ್ನಾತಕೋತ್ತರ ಪದವಿಯ ಸಮಾಜಶಾಸ್ತ್ರ ವಿಭಾಗದಲ್ಲಿ ಅವರು ಬಂಗಾರದ ಪದಕ ಗೆಲ್ಲುವ ಸಾಧನೆ ಮಾಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಅಂಕ ಪಡೆದು ಅವರು ಪದಕ ಗೆದ್ದಿದ್ದಾರೆ.

ಧಾರವಾಡದ ಗಾಂಧಿ ಭವನದಲ್ಲಿ ಜರುಗಿದ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ 74ನೇ ಘಟಿಕೋತ್ಸವದಲ್ಲಿ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ ಅವರು ಸುಪ್ರಜಾ ಅವರಿಗೆ ಪದಕ ನೀಡಿ ಗೌರವಿಸಿದರು. ಸುಪ್ರಜಾ ಅವರು ಕಾರವಾರದಲ್ಲಿ ಸಹ ಕಲಿತಿದ್ದಾರೆ. ಅವರ ತಂದೆ ಪರಶುರಾಮ ನಾಯಿಕ ಅವರು ಕಾರವಾರದಲ್ಲಿ ಉಪತಹಶೀಲ್ದಾರ್ ಆಗಿ ಜನ ಮೆಚ್ಚುಗೆ ಪಡೆದಿದ್ದರು. ಪ್ರಸ್ತುತ ಅವರು ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿಯ ಉಪತಹಶೀಲ್ದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page