6
  • Latest

ಬುಡಕಟ್ಟು ಗ್ರಾಮಕ್ಕೆ ಪ್ರಧಾನಿ ಕೊಡುಗೆ: 31 ಗ್ರಾಮಗಳ ಅಭಿವೃದ್ಧಿಗೆ ಪಣ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಬುಡಕಟ್ಟು ಗ್ರಾಮಕ್ಕೆ ಪ್ರಧಾನಿ ಕೊಡುಗೆ: 31 ಗ್ರಾಮಗಳ ಅಭಿವೃದ್ಧಿಗೆ ಪಣ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದವರು ವಾಸವಿರುವ 31 ಗ್ರಾಮಗಳಿಗೆ ವಿಶೇಷ ಕೊಡುಗೆ ದೊರೆತಿದೆ. ಈ ಗ್ರಾಮಗಳಲ್ಲಿ ಪಕ್ಕಾ ಮನೆ ನಿರ್ಮಾಣ, ಸಂಪರ್ಕ ರಸ್ತೆ, ನೀರು ಸರಬರಾಜು, ವಿದ್ಯುದ್ಧೀಕರಣ, ಸೌರ ವಿದ್ಯುತ್ ಯೋಜನೆ, ಅಂಗನವಾಡಿಗಳ ಅಭಿವೃದ್ಧಿ, ಉತ್ತಮ ಇಂಟರ್‌ನೆಟ್ ಸೇವೆ, ಕೃಷಿ ಉತ್ತೇಜನ ಪ್ರಯತ್ನ, ಜಾನುವಾರು ಸಾಕುವವರಿಗೆ ಪ್ರೋತ್ಸಾಹ, ಅಗತ್ಯ ಕಟ್ಟಡ ನಿರ್ಮಾಣ, ಬುಡಕಟ್ಟು ಸಂಸ್ಕೃತಿ ಪರಿಚಯ ಪ್ರವಾಸೋದ್ಯಮದ ಹೊಸ ಅವಕಾಶಗಳು ಬಾಗಿಲು ತೆರೆದುಕೊಂಡಿವೆ.

ದೇಶದ ಎಲ್ಲಡೆ ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನ ನಡೆಯುತ್ತಿದ್ದು, ಇದರ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ 31 ಗ್ರಾಮಗಳನ್ನು ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಗೆ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಈ ಯೋಜನೆ ನೆರವಾಗಲಿದೆ. ಈ ಅಭಿಯಾನದ ಅಡಿ ಬುಡಕಟ್ಟು ಪ್ರದೇಶಗಳಲ್ಲಿ ಸಾಮಾಜಿಕ ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಜೀವನೋಪಾಯದಲ್ಲಿನ ನಿರ್ಣಾಯಕ ಅಂತರ ನಿವಾರಿಸುವ ಗುರಿ ಹೊಂದಲಾಗಿದೆ. ಪ್ರಧಾನ ಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನದಡಿ ಈ ಗ್ರಾಮಗಳಲ್ಲಿ ವಾಸಿಸುವ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೂಲಭೂತ ಸೌಕರ್ಯ, ಆರ್ಥಿಕ ಸಬಲೀಕರಣ, ಉತ್ತಮ ಶಿಕ್ಷಣಕ್ಕೆ ಪ್ರವೇಶ ಮತ್ತು ಆರೋಗ್ಯಕರ ಗೌರವಾನ್ವಿತ ಜೀವನ ಈ ಎಲ್ಲಾ ಗುರಿಗಳೊಂದಿಗೆ ಗ್ರಾಮಗಳ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಅಭಿಯಾನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ದೇಶದಲ್ಲಿ 79,156 ಕೋಟಿ ರೂ ಮೀಸಲಿಟ್ಟಿದೆ. ಭಾರತದಲ್ಲಿ 63,000 ಗ್ರಾಮಗಳನ್ನು ಈ ಯೋಜನೆ ಅಡಿ ಅಭಿವೃದ್ಧಿ ಪಡಿಸಲು ಕ್ರಿಯಾ ಯೋಜನೆ ರೂಪಿಸಿಸಲಾಗಿದೆ. ಇದರಿಂದ ದೇಶದ ಎಲ್ಲಡೆ 5 ಕೋಟಿ ಜನರಿಗೆ ಅನುಕೂಲವಾಗಲಿದೆ. 2024-25ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ. 2024-25ರಿಂದ 2025-26ನೇ ಸಾಲಿಗೆ ಒಟ್ಟು ರೂ.4,000 ಕೋಟಿ ಅನುದಾನವನ್ನು ಈ ಯೋಜನೆಗೆ ನಿಗದಿ ಮಾಡಲಾಗಿದೆ. 17 ವಿವಿಧ ಇಲಾಖೆಗಳ ಮೂಲಕ ಅಭಿವೃದ್ಧಿ ಕೆಲಸಗಳು ನಡೆಯಲಿದೆ.

Advertisement. Scroll to continue reading.

ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನದಡಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ 1, ಭಟ್ಕಳದ 3 ಜೋಯಿಡಾದ 4 ಮತ್ತು ಮುಂಡಗೋಡ ತಾಲೂಕಿನ 23 ಊರುಗಳು ಆಯ್ಕೆಯಾಗಿದೆ. ಈ ಊರುಗಳಲ್ಲಿ ಬುಡಕಟ್ಟು ಬಹು ಉಪಯೋಗಿ ಮಾರ್ಕೇಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳ ಸುಧಾರಣೆ ಆಗಲಿದೆ. ಸಿಕಲ್ ಸೇಲ್ ಪರೀಕ್ಷಾ ಕೇಂದ್ರ ಮತ್ತು ಕೌನ್ಸಿಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ, ಉತ್ಪನ್ನಗಳ ಪ್ರದರ್ಶನ ನೀಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ.

ShareSendTweetShare
ADVERTISEMENT
Previous Post

ಬಂಗಾರ ಗೆದ್ದ ಸುಪ್ರಜಾ

Next Post

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

Next Post

ಗಟಾರಕ್ಕೆ ಉರುಳಿದ ಕಳಚೆ ಬಸ್ಸು

ಮಾದಕ ವ್ಯಸನಿಯ ಅಮಲು ಇಳಿಸಿದ ಪೊಲೀಸರು

ಕಾಳಿ ನದಿಯಲ್ಲಿ ತೇಲಿದ ಮಹಿಳೆಯ ಶವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.