6

ರಾಜ್ಯ ಹೆದ್ದಾರಿಗೆ ಸಿಕ್ಕಿಲ್ಲ ಅಭಿವೃದ್ಧಿಯ ಭಾಗ್ಯ!

ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ ಹಾಳಾಗಿದೆ. ಹಬ್ಬುವಾಡದಿಂದ ಮುಂದೆ ಸಂಚರಿಸಿದಾಗ ಸಂಪೂರ್ಣವಾಗಿ ಹೊಂಡಗಳೇ ಕಾಣಿಸುತ್ತಿದೆ. ಇದರಿಂದ ನಿತ್ಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೆಲ ವರ್ಷದ ಹಿಂದೆ ಕೋಟಿ ಲೆಕ್ಕಾಚಾರದಲ್ಲಿ ಹಣ ವೆಚ್ಚ ಮಾಡಿ ಈ ರಸ್ತೆ ನಿರ್ಮಿಸಲಾಗಿತ್ತು. ಆದರೆ, ಗುಣಮಟ್ಟದ ಕಾಮಗಾರಿ ನಡೆಸದ ಕಾರಣ ರಸ್ತೆ ರಿಪೇರಿ ಆಗಿಲ್ಲ ಎಂಬುದು ಜನರ ದೂರು. ರಾತ್ರಿ ವೇಳೆ ಸಂಚರಿಸುವಾಗ ರಸ್ತೆ ಹೊಂಡದ ಕಾರಣ ವಾಹನಗಳು ಅಪಘಾತಕ್ಕೀಡಾಗುತ್ತಿವೆ. ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ.
ಲೋಕೋಪಯೋಗಿ ಇಲಾಖೆ ಈ ರಸ್ತೆ ಹೊಣೆ ಹೊತ್ತಿದ್ದು ಕೂಡಲೇ ದುರಸ್ತಿ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ನರೇಂದ್ರ ತಳೇಕರ ಹಾಗೂ ನಗರ ಘಟಕ ಅಧ್ಯಕ್ಷ ರಾಜಾ ನಾಯ್ಕ ಕಡವಾಡ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page