ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ಗೇರುಸೊಪ್ಪದ ಬಳಿ ಅಪಘಾತಕ್ಕೀಡಾಗಿದೆ.
ಈ ಬಸ್ಸು ಗೋವಾಗೆ ತೆರಳುತ್ತಿತ್ತು. ಚಿಕ್ಕಮಂಗಳೂರಿನಿoದ ಹೊರಟಿತ್ತು. ಭಾನುವಾರ ಸಂಜೆ ಗೇರುಸೊಪ್ಪದಿಂದ 2ಕಿಮೀ ದೂರದಲ್ಲಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿತು. ಪರಿಣಾಮ ಬಸ್ಸು ಧರೆಗೆ ಗುದ್ದಿತು.
ಅಪಘಾತದ ರಭಸಕ್ಕೆ ಬಸ್ಸಿನಲ್ಲಿ ಸಂಚರಿಸುತ್ತಿದ್ದ 9 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಕೆಲವರನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸರ್ಕಾರಿ ಸ್ವಾಮ್ಯದ 108 ಹಾಗೂ ಖಾಸಗಿ ಆಂಬುಲೆನ್ಸ್ ಮೂಲಕ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.