ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ನದಿ ದಡದಲ್ಲಿರುವವರು ಹಾಗೂ ಸುತ್ತಲಿನ ಮನೆಯವರು ಸುರಕ್ಷಿತ ಸ್ಥಳಗಳಿಗೆ ತೆರಳುವುದು ಒಳಿತು. ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಜನರಲ್ಲಿ ಮನವಿ ಮಾಡಿದ್ದು, ಅಧಿಕಾರಿಗಳಿಗೆ ತ್ವರಿತ ಕ್ರಮಕ್ಕೆ ಆದೇಶಿಸಿದ್ದಾರೆ. ಈ ಭಾಗದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳ ಪ್ರಯತ್ನ ಮುಂದುವರೆದಿದೆ. ಜನರು ಇದಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೇಳಿಕೊಂಡಿದ್ದಾರೆ.
Discussion about this post