ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿರುವವರನ್ನು ಹುಡುಕಲು ಸುರತ್ಕಲ್ನ ಎನ್.ಐ.ಟಿ.ಕೆಯಿಂದ ಆಗಮಿಸಿರುವ ತಜ್ಞರ ತಂಡ ರಾಡಾರ್ ಮೂಲಕ ಪತ್ತೆ ಕಾರ್ಯಚರಣೆ ಕೈಗೊಂಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ತಂಡ ಮತ್ತು ಅಗ್ನಿಶಾಮಕ ಇಲಾಖೆವತಿಯಿಂದ ಸಮೀಪದ ನದಿಯಲ್ಲಿಯೂ ಪತ್ತೆ ಕಾರ್ಯ ನಡೆಯುತ್ತಿದೆ. ಹೆಲಿಕ್ಯಾಪ್ಟರ್ ಮೂಲಕ ಕಾರ್ಯಾಚರಣೆ ಮಾಡಲು ಜಿಲ್ಲಾಡಳಿತ ಈಗಾಗಲೇ ಕ್ರಮ ಕೈಗೊಂಡಿದ್ದು ಹವಾಮಾನ ವೈಪರಿತ್ಯದ ಕಾರಣದಿಂದ ವಿಳಂಬವಾಗಿದೆ. `ಶಿರೂರು ಬಳಿಯ ಗುಡ್ಡ ಕುಸಿತದಲ್ಲಿ ಸಿಲುಕಿರುವವನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ನಿರಂತರವಾಗಿ ವ್ಯಾಪಕ ಶೋಧ ಕಾರ್ಯಚರಣೆ ನಡೆಸಿದೆ’ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
Discussion about this post