6

ಸೀಬರ್ಡ ಸಂತ್ರಸ್ತರಿಗೆ ಬೇಕು ಆರ್ಥಿಕ ಭದ್ರತೆ: ರಕ್ಷಣಾ ಸಚಿವರ ಮುಂದೆ ಸಂಸದರ ಬೇಡಿಕೆ!

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಸೀಬರ್ಡ ನೌಕಾನೆಲೆ ಸಂತರಸ್ತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಲು ಒತ್ತಾಯಿಸಿದರು.

ನವದೆಹಲಿಗೆ ತೆರಳಿದ ಕಾಗೇರಿ ಕಾರವಾರದ ಸೀಬರ್ಡ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಿಗೆ ಮನವರಿಕೆ ಮಾಡಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಅವರು ವಿಸ್ತಾರವಾಗಿ ವಿವರಿಸಿದರು. `ಬಾಕಿ ಇರುವ ಭೂ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ನಾನಾ ಸಮಸ್ಯೆಗಳ ಕಾರಣ ನಿಧಾನವಾಗುತ್ತಿರುವ ಕಡತಗಳನ್ನು ವಿಲೇವಾರಿ ನಡೆಸಬೇಕು’ ಎಂದು ಆಗ್ರಹಿಸಿದರು.

`ನೌಕಾನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಸಿ ಬರ್ಡ್ ನೌಕನೆಲೆಯಲ್ಲಿ ನಡೆಯುವ ಉದ್ಯೋಗ ಪರೀಕ್ಷಾ ಕೇಂದ್ರವನ್ನು ಕಾರವಾರದಲ್ಲಿಯೇ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಈ ಎಲ್ಲಾ ಸಮಸ್ಯೆ ಬಗೆಹರಿಸುವ `ಚಿಂತನೆ’ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ಭರವಸೆ ನೀಡಿದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page