6

ನೌಕಾನೆಲೆಯಲ್ಲಿ ಮೊಳಗಿದ ದೇಶಪ್ರೇಮ: ಸಿಡಿಮದ್ದು ಪ್ರದರ್ಶನ ನೋಡಿ ಸಂಭ್ರಮಿಸಿದ ರಾಜ್ಯಪಾಲ

ಕಾರವಾರ: 1971ರಲ್ಲಿ ಪಾಕಿಸ್ತಾನವೂ ಕರಾಜಿ ಮೇಲೆ ದಾಳಿ ನಡೆಸಿದ್ದು, ಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಡಿಸೆಂಬರ್ 4ರಂದು ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ. ಕಾರವಾರದ ನೌಕಾನೆಲೆಯಲ್ಲಿ ಬುಧವಾರ ನಡೆದ ನಾಕಾದಿನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿ ಯುದ್ಧ ನೌಕೆಗಳ ಶಕ್ತಿ ಪ್ರದರ್ಶನದ ಬಗ್ಗೆ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ವಿವಿಧ ದೇಶಭಕ್ತಿ ಗೀತೆಗಳನ್ನು ನುಡಿಸಿದರು. ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು.

ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ಐಎನ್‌ಎಸ್ ಮಕರ, ಐಎನ್‌ಎಸ್ ಸುಭದ್ರಾ, ಯಾರ್ಡ್ ಕ್ರಾಫ್ಟ್ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸುಡುಮದ್ದುಗಳನ್ನು ಸಿಡಿಸಲಾಯಿತು. ಅಗ್ನಿವೀರರು,ನೌಕಾಪಡೆಯ ಸಿಬ್ಬಂದಿ, ನೌಕಾನೆಲೆಂ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ವಿಜಯ ಕುಮಾರ್, ಕರ್ನಾಟಕ ನೌನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆAಟ್ ಆಫಿಸರ್ ರಿಯರ್ ಅಡ್ಮಿರಲ್ ಕೆ.ಎಂ.ರಾಮಕೃಷ್ಣÀ್ಣನ್, ಕ್ಯಾಪ್ಟನ್ ಬೀರೇಂದ್ರ ಎಸ್.ಬೈನ್ಸ್, ಕಾರವಾರ ಉಪವಿಭಾಗಾಧಿಕಾರಿ ಕನಿಷ್ಕ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.

 

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page