6

ಅಡಿಕೆ ವಿಷಯ | ಸಂಸದ – ಸಚಿವರ ನಡುವೆ ಪತ್ರ ವ್ಯವಹಾರ!

ಶಿರಸಿ: 2024ರ ಸೆಪ್ಟೆಂಬರ್ ಅಂತ್ಯದವರೆಗಿನ ಲೆಕ್ಕಾಚಾರದ ಪ್ರಕಾರ ವಿದೇಶಗಳಿಂದ ಭಾರತಕ್ಕೆ ಅಕ್ರಮವಾಗಿ ಆಮದಾಗಿದ್ದ 264.26 ಕೋಟಿ ರೂ. ಮೌಲ್ಯದ ಅಡಿಕೆಯನ್ನು ಸಿಬಿಐಸಿ ವಶಕ್ಕೆ ಪಡೆದಿದೆ. ಸುಳ್ಳು ತೆರಿಗೆ ಹಾಗೂ ಲೆಕ್ಕಾಚಾರದ ಮೂಲಕ ಭಾರತಕ್ಕೆ ಬಂದಿದ್ದ 9.75 ಕೋಟಿ ರೂ ಮೌಲ್ಯದ 168.45 ಮೆಟ್ರಿಕ್ ಟನ್ ಅಡಕೆಯ ಜೊತೆ 7 ಕಂಟೇನರ್’ಗಳನ್ನು ಸಹ ಕಳೆದ ಅಗಷ್ಟ್ ತಿಂಗಳಿನಲ್ಲಿ ಚೆನೈ ಬಂದರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. `ವಿದೇಶದಿಂದ ಭಾರತಕ್ಕೆ ಅಕ್ರಮ ಅಡಿಕೆ ಬಾರದಂತೆ ತಡೆಯಲು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಿದೆ. ಭಾರತ – ಮ್ಯಾನ್‌ಮಾರ್ ಮತ್ತು ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಟ್ಟೆಚ್ಚರವಹಿಸಲಾಗಿದೆ’ ಎಂದು ಈ ಪತ್ರದಲ್ಲಿ ವಿವರಿಸಲಾಗಿದೆ.

`ಅಡಕೆಗೆ ನಿಗದಿಯಾಗಿರುವ ಕನಿಷ್ಠ ಆಮದು ಬೆಲೆ ಪರಿಷ್ಕರಣೆ ಸಂಬoಧ ಕೃಷಿ ಮತ್ತು ಕೃಷಿಕ ಕಲ್ಯಾಣ ಸಚಿವಾಲಯಕ್ಕೆ ಶಿಫಾರಸು ಮಾಡಲಾಗಿದೆ. ಎಂಐಪಿ ಪರಿಷ್ಕರಣೆ ಸಂಬoಧ ವಿದೇಶಿ ವ್ಯವಹಾರಗಳ ನಿರ್ದೇಶನಾಲಯ ಪರಿಶೀಲನೆಗೆ ಸೂಚನೆ ನೀಡಲಾಗಿದೆ’ ಎಂದು ಸಚಿವ ಪಂಕಜ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಅಡಿಕೆ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿ ಅಗಷ್ಟ್ ತಿಂಗಳಿನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಈ ಎಲ್ಲಾ ವಿಷಯ ವಿವರಿಸಿದ್ದಾರೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page