6

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

ಜೊಯಿಡಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಗು ಮಾರಾಟ ಜಾಲ ಸದ್ದು ಮಾಡುತ್ತಿದೆ. ಕೆಲ ದಿನಗಳ ಹಿಂದೆ ಮುಂಬೈ ಪೊಲೀಸರು ಕಾರವಾರದಲ್ಲಿ ಮಗು ಮಾರಾಟದ ಪ್ರಕರಣವನ್ನು ಜಾಲಾಡಿದ್ದು, ಅದರ ಬೆನ್ನಲ್ಲೆ ಇದೀಗ ಜೊಯಿಡಾದ ಖಾಸಗಿ ಹೊಟೇಲ್’ನಲ್ಲಿ ಮಗು ಮಾರಾಟ ನಡೆದ ಪ್ರಕರಣ ಮುನ್ನೆಲೆಗೆ ಬಂದಿದೆ.

13 ತಿಂಗಳ ಹೆಣ್ಣು ಮಗುವನ್ನು ಆಕೆಯ ಪೋಷಕರು ಗೋವಾದ ಕುಟುಂಬಕ್ಕೆ ಮಾರಾಟ ಮಾಡಿದ್ದನ್ನು ಮಕ್ಕಳ ರಕ್ಷಣಾ ಸಮಿತಿಯವರು ಪತ್ತೆ ಮಾಡಿದ್ದಾರೆ. ಬೆಳಗಾವಿ ಪೊಲೀಸರ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಮೂಲದ ರಾಜೇಂದ್ರ ಮೇತ್ರಿ ಮತ್ತು ಅವರ ಪತ್ನಿ ಶಿಲ್ಪಾ ಮೇತ್ರಿ ಅವರು ತಮ್ಮ ಮಗಳನ್ನು ಗೋವಾದ ಸ್ಮಿತಾ ವಾಡಿಕರ್ ಅವರಿಗೆ ಮಾರಾಟ ಮಾಡಿದ್ದಾರೆ. ಈ ಒಪ್ಪಂದಕ್ಕೆ ಬೆಳಗಾವಿಯ ವಂದನಾ ಸುರವೆ, ಮಹಾರಾಷ್ಟ್ರದ ಸೊಲ್ಲಾಪುರದ ರವಿ ರಾವುತ್ ಮತ್ತು ರಾಣಿ ರಾವುತ್ ಮಧ್ಯಸ್ಥಿಕೆ ವಹಿಸಿರುವುದು ಗೊತ್ತಾಗಿದೆ.

ಜೋಯಿಡಾ ತಾಲೂಕಿನ ರಾಮನಗರದಲ್ಲಿ ಈ ವ್ಯವಹಾರ ನಡೆದಿದ್ದು, ಅಪರಿಚಿತರೊಬ್ಬರು ಬೆಳಗಾವಿಯ ಮಕ್ಕಳ ರಕ್ಷಣಾ ಸಮಿತಿಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ ನಂತರ ಪ್ರಕರಣ ಬಯಲಾಗಿದೆ. ಮಕ್ಕಳ ರಕ್ಷಣಾ ಸಮಿತಿ ಸದಸ್ಯರು ನೀಡಿದ ಸುಳಿವಿನ ಮೇರೆಗೆ ಬೆಳಗಾವಿ ನಗರ ಪೊಲೀಸರ ನೆರವಿನಿಂದ ಮಗುವನ್ನು ರಕ್ಷಿಸಿದ್ದಾರೆ.

ಮಾರಾಟವಾಗಿದ್ದ ಮಗುವನ್ನು ರಕ್ಷಿಸಿ ಮಕ್ಕಳ ದತ್ತು ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಮಕ್ಕಳ ಮಾರಾಟ ದಂಧೆಯಲ್ಲಿ ಹಲವರು ನಿರತರಾಗಿರುವ ಶಂಕೆ ವ್ಯಕ್ತವಾಗಿದೆ.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page