6

ಸಾಲ ಕೊಡದ ಬ್ಯಾಂಕುಗಳಿಗೆ ತಪರಾಕಿ!

ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ಸಾಲ ನೀಡದೇ ಸತಾಯಿಸುವ ಬ್ಯಾಂಕುಗಳ ವಿರುದ್ಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಕಾಂದೂ ಗರಂ ಆಗಿದ್ದಾರೆ. `ಪಿಎಂ ಸ್ವನಿಧಿ, ಪಿಎಂ ಉದ್ಯೋಗ ಸೃಜನಾ ಯೋಜನೆ, ಪಿಎಂಎಫ್‌ಎoಇ ಯೋಜನೆ ಅಡಿ ಅಗತ್ಯವಿದ್ದವರಿಗೆ ಸಾಲ ಕೊಡಿ’ ಎಂದು ಅವರು ತಾಕೀತು ಮಾಡಿದ್ದಾರೆ.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಗ್ರಣಿ ಬ್ಯಾಂಕ್ ಆಯೋಜಿಸಿದ್ದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಸರ್ಕಾರದ ಯೋಜನೆಗಳ ಸಾಲ ಸೌಲಭ್ಯ ಮುಂಜೂರಾತಿಗೆ ಬಾಕಿ ಉಳಿದಿರುವ ಅರ್ಜಿಗಳಿಗೆ ಸಂಬAಧಿಸಿ ವಿಚಾರಣೆ ನಡೆಸಿದರು. ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಿದರು. ಕರ್ನಾಟಕ ಬ್ಯಾಂಕಿಗೆ ಸಲ್ಲಿಕೆಯಾದ ಅರ್ಜಿಗಳ ಪೈಕಿ ಪಿಎಂ ಸ್ವನಿಧಿ ಯೋಜನೆಯಲ್ಲಿ 36 ಫಲಾನುಭವಿಗಳಿಗೆ ಮಂಜೂರಾದ ಸಾಲವನ್ನು ವಿತರಣೆ ಮಾಡ ಬಗ್ಗೆ ಆಕ್ಷೇಪಿಸಿದರು. ಒಂದು ವಾರದೊಳಗೆ ಮುಂಜೂರಾದ ಎಲ್ಲಾ ಫಲಾನುಭವಿಗಳಿಗೆ ಸಾಲದ ಮೊತ್ತವನ್ನು ಪಾವತಿಸುವಂತೆ ಸೂಚಿಸಿದರು.

`ಬ್ಯಾಂಕಿಗೆ ಬರುವ ಗ್ರಾಹಕರ ಜೊತೆ ಸಿಬ್ಬಂದಿ ಸೌಜನ್ಯದಿಂದ ವರ್ತಿಸದ ಬಗ್ಗೆ ಸಾಕಷ್ಟು ದೂರು ಬರುತ್ತಿವೆ. ಯೋಜನೆಗಳ ಬಗ್ಗೆ ಬ್ಯಾಂಕ್ ಸಿಬ್ಬಂದಿ ಅರಿವು ಮೂಡಿಸಬೇಕು’ ಎಂದು ಸೂಚಿಸಿದರು. `ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಬಿಮಾ ಸುರಕ್ಷಾ ಯೋಜನೆಯ ಬಗ್ಗೆ ಗ್ರಾಹಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕೆಲಸವನ್ನು ಬ್ಯಾಂಕ್‌ಗಳು ಮಾಡಬೇಕು’ ಎಂದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page