6

ಆ ಲಾರಿ ತುಂಬ ಅಕ್ರಮ ಜಾನುವಾರು ಸಂತೆ!

ಮಹಾರಾಷ್ಟದಿoದ ಭಟ್ಕಳದ ಕಸಾಯಿಖಾನೆಗಳಿಗೆ ಬರುತ್ತಿದ್ದ 13 ಜಾನುವಾರುಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಭಟ್ಕಳ ತಾಲೂಕಿನ ಶಿರಾಲಿ ಚೆಕ್ ಪೋಸ್ಟ್ ಬಳಿ ಲಾರಿ ತಡೆಹಿಡಿದ ಪೊಲೀಸರಿಗೆ ರಾಜಾರೋಷವಾಗಿ ಸಾಗಿಸುತ್ತಿದ್ದ ಜಾನುವಾರುಗಳು ಕಾಣಿಸಿದೆ. ದಾಖಲೆ ಪ್ರಶ್ನಿಸಿದಾಗ ಆ ಲಾರಿಯಲ್ಲಿದ್ದವರ ಬಳಿ ಯಾವ ಕಾಗದ ಪತ್ರಗಳು ಇರಲಿಲ್ಲ. ಹೀಗಾಗಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದು, ಉಳಿದ ಮೂವರು ಓಡಿ ತಪ್ಪಿಸಿಕೊಂಡಿದ್ದಾರೆ.

ಆ ಲಾರಿಯಲ್ಲಿ 9 ಎತ್ತು ಮತ್ತು 4 ಕೋಣಗಳಿದ್ದವು. ಪಾಲೆಗಾಂವ್’ನಿoದ ಅವು ಭಟ್ಕಳಕ್ಕೆ ಬರುತ್ತಿತ್ತು. ಸದ್ಯ ಔರಂಗಾಬಾದ್ ಜಿಲ್ಲೆಯ ಜಮೀಲ್ ಯೂಸುಫ್ ಶೇಖ್ (49) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹಿಂದು ಜಾಗರಣಾ ವೇದಿಕೆಯವರು ನೀಡಿದ ಮಾಹಿತಿ ಅನ್ವಯ ಡಿವೈಎಸ್ಪಿ ಮಹೇಶ ಕೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪಿಎಸೈ ರನ್ನ ಗೌಡ ಪಾಟೀಲ ಮತ್ತು ಭರ್ಮಪ್ಪ ಬೆಳಗಲಿ ನೇತೃತ್ವದಲ್ಲಿ ಎಎಸ್‌ಐ ಕೃಷ್ಣಾನಂದ ನಾಯ್ಕ, ಪೊಲೀಸ್ ಸಿಬ್ಬಂದಿ ಬಸವರಾಜ ಡಿ ಕೆ, ಮೋಹನ ಕಬ್ಬೇರ, ವೀರಣ್ಣ ಬಳ್ಳಾರಿ, ಲೋಹಿತ್ ಕುಮಾರ ಎಂ ಪಿ., ಅಂಬರೀಶ ಕುಂಬಾರಿ, ಕಿರಣ ತಿಳಗಂಜಿ ಲಾರಿಯನ್ನು ಅಡ್ಡ ಹಾಕಿದರು.

ಹಿಂದು ಜಾಗರಣಾ ವೇದಿಕೆ ಸಹ ಸಂಚಾಲಕರಾದ ನಾಗೇಶ ನಾಯ್ಕ ಹೊನ್ನೆಗದ್ದೆ, ಕುಮಾರ ನಾಯ್ಕ ಹನುಮಾನನಗರ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಡಭಟ್ಕಳ, ಲೋಕೇಶ ದೇವಾಡಿಗ ಸಹ ಸ್ಥಳದಲ್ಲಿದ್ದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page