6

ಯುದ್ಧದ ಆತಂಕ: ಕಾರವಾರದಲ್ಲಿ ಸಮರಾಭ್ಯಾಸ!

ಭಾರತ-ಪಾಕಿಸ್ತಾನ ನಡುವೆ ಯುದ್ಧ ನಡೆಯುವ ಸಾಧ್ಯತೆ ಹಿನ್ನಲೆ ರಾಜ್ಯದ ಮೂರು ಕಡೆ ಸಮರಾಭ್ಯಾಸ ನಡೆಸುವ ಸಿದ್ಧತೆ ನಡೆದಿದೆ. ಅದರ ಪ್ರಕಾರ ಕಾರವಾರದಲ್ಲಿ ಸಹ ಮೇ 7ರಿಂದ ಈ ಸಮರಾಭ್ಯಾಸ ನಡೆಯಲಿದೆ.

ಈ ಅಣಕು ಕಾರ್ಯಾಚರಣೆಯಲ್ಲಿ ಯುದ್ಧ ನಡೆದರೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮದ ಬಗ್ಗೆ ಜನರಲ್ಲಿಯೂ ಅರಿವು ಮೂಡಿಸಲಾಗುತ್ತದೆ. ಇದಕ್ಕೆ `ಆಪರೇಶನ್ ಅಭ್ಯಾಸ್’ ಎಂದು ಹೆಸರಿಡಲಾಗಿದೆ. ಕದಂಬ ನೌಕಾನೆಲೆ ಹಾಗೂ ಕೈಗಾ ಅಣು ವಿದ್ಯುತ್ ಘಟಕ ವ್ಯಾಪ್ತಿಯಲ್ಲಿ ಅಣಕು ಕಾರ್ಯಾಚರಣೆ ನಡೆಯಲಿದೆ.

ಯುದ್ಧದ ಸನ್ನಿವೇಶವನ್ನು ಸಮರ್ಥವಾಗಿ ಎದುರಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಗೃಹರಕ್ಷಕ ದಳ, ಎನ್‌ಸಿಸಿ, ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್, ನೇವಿ ಸೇರಿದಂತೆ ಸಿವಿಲ್ ಸಿಬ್ಬಂದಿ ಸಹ ಕಾರ್ಯಾಚರಣೆಯ ರೂವಾರಿಗಳಾಗಿದ್ದಾರೆ.

ಬುಧವಾರ ಬೆಳಗ್ಗೆ ನಾಲ್ಕು ಗಂಟೆಗೆ ಅಣಕು ಕಾರ್ಯಾಚರಣೆಯ ಮಾಕ್ ಡ್ರಿಲ್ ಆರಂಭವಾಗಲಿದೆ. ಜನರಿಗೆ ಭಾರತೀಯ ನೌಕಾಪಡೆ, ಆರ್ಮಿ ಜೊತೆ ಸಂಪರ್ಕ ಸಾಧಿಸಲು ತರಬೇತಿ ನೀಡಲಾಗುತ್ತದೆ. ಅಗ್ನಿಶಾಮಕ ಕಾರ್ಯಾಚರಣೆ, ಅಪಾಯದಿಂದ ರಕ್ಷಣೆಯ ಉಪಾಯಗಳನ್ನು ಕಲಿಸಲಾಗುತ್ತದೆ.

ಈ ಎಲ್ಲಾ ವಿಷಯಗಳ ಬಗ್ಗೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಮಂಗಳವಾರ ಸಂಜೆ ಮಾಹಿತಿ ನೀಡಿದರು. `ಯುದ್ಧದ ವಾತಾವರಣದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ತೊಂದರೆಗೆ ಸಿಲುಕಿದವರನ್ನು ರಕ್ಷಣೆ ಮಾಡುವ ಉದ್ದೇಶ ಅಣಕು ಕಾರ್ಯಾಚರಣೆಯದ್ದಾಗಿದೆ’ ಎಂದವರು ತಿಳಿಸಿದರು.

  • Related Posts

    ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ

    Share this… Facebook Pinterest Twitter Linkedin Whatsappನವದೆಹಲಿಯಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಇಂದು ನವದೆಹಲಿಯಲ್ಲಿ ನಡೆದ…

    ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

    Share this… Facebook Pinterest Twitter Linkedin Whatsappರಾಜಸ್ಥಾನದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿ.ಸಿ.…

    You cannot copy content of this page