6

ಹಾವೇರಿ ಜಿಲ್ಲೆಯ ರೈತರಿಗೆ ಸಿಹಿಸುದ್ದಿ!

ಶ್ರೇಷ್ಠ ತೋಟಗಾರಿಕೆ ರೈತ – ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಹಾವೇರಿ: ಅ.22 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿನ ‘ತೋಟಗಾರಿಕಾ ಮೇಳ’ವನ್ನು ಡಿಸೆಂಬರ್ 23 ರಿಂದ 25 ರವರೆಗೆ “ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ತೋಟಗಾರಿಕಾ ಮೇಳದಲ್ಲಿ ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ ವಿಶ್ವವಿದ್ಯಾಲಯದ ವತಿಯಿಂದ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕಾ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

ಆದ್ದರಿಂದ ಈ ಪ್ರಶಸ್ತಿಗಾಗಿ ಹಾವೇರಿ ಜಿಲ್ಲೆಯ ರೈತ/ರೈತ ಮಹಿಳೆಯರು ಅರ್ಜಿ ನಮೂನೆಯನ್ನು (ಅನುಬಂಧ-1) ದಾನವೀರ ಸಿರಸಂಗಿ ಶ್ರೀ ಲಿಂಗರಾಜ ದೇಸಾಯಿ ತೋಟಗಾರಿಕಾ ಅಭಿಯಾಂತ್ರಿಕ ಮತ್ತು ಆಹಾರ ತಂತ್ರಜ್ಞಾನ ಮಹಾವಿದ್ಯಾಲಯ, ದೇವಿಹೊಸೂರು ಕಚೇರಿಯಲ್ಲಿ ಅಥವಾ ತೋ.ವಿ.ವಿ.ಯ ವೆಬ್‌ಸೈಟ್: www.uhsbagalkot.karnataka.gov.in ಮೂಲಕ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು 03 ನವೆಂಬರ್ 2026ರ ಸಂಜೆ 5 ಗಂಟೆಯೊಳಗಾಗಿ ಈ ಮೇಲಿನ ವಿಳಾಸಕ್ಕೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊ. 9480696396/9740603949 ಅಥವಾ ಶುಲ್ಕ ರಹಿತ ಉದ್ಯಾನ ಸಹಾಯವಾಣಿ 1800-425-7910 ಸಂಖ್ಯೆಗೆ ಸಂಪರ್ಕಿಸಬಹುದು.

  • Related Posts

    ಹಾವೇರಿ: ಸನ್ಮಾನಕ್ಕೆ ಸಾಧಕರಿಂದ ಅರ್ಜಿ ಆಹ್ವಾನ

    Share this… Facebook Pinterest Twitter Linkedin Whatsappಹಾವೇರಿ: ಅ.22 : ಜಿಲ್ಲಾಡಳಿತದಿಂದ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ, ವಿಜ್ಞಾನ-ತಂತ್ರಜ್ಞಾನ, ಕೃಷಿ, ಪರಿಸರ, ಪೌರಕಾರ್ಮಿಕ,…

    ಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗೆ ಜಡೆ ಜಗಳ!!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗಾಗಿ ಮಹಿಳೆಯರ ಜಡೆಜಗಳ! ಮಾಂಗಲ್ಯ ಸರ ಕಿತ್ತುಕೊಂಡು ಹೊಡೆದಾಟ ಹಾವೇರಿ: ಸಿನಿಮಾ ಟಿಕೆಟ್ ವಿಚಾರವಾಗಿ ಹಾವೇರಿಯ ಮಾಗಾವಿ ಚಿತ್ರಮಂದಿರದ ಮುಂದೆ ಮಹಿಳೆಯರ ನಡುವೆ ಜಗಳ ನಡೆದಿದ್ದು, ಪರಸ್ಪರ ಹಲ್ಲೆ ಮಾಡಿಕೊಂಡ…

    You cannot copy content of this page