6

ಉಚಿತ ನೇತ್ರ ತಪಾಸಣಾ ಶಿಬಿರ

ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಗುರುವಾರ ಪ್ರಾದೇಶಿಕ ಕಚೇರಿಯಲ್ಲಿ ಜರುಗಿತು.

ಉದ್ಘಾಟನೆ ನೆರವೇರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯ ಕಾಟೋಕರ ಅವರು ಮಾತನಾಡಿ, ವಾಹನ ಚಾಲನೆ ಸಮಯದಲ್ಲಿ ಕಣ್ಣುಗಳು ಮಹತ್ವರ ಪಾತ್ರ ವಹಿಸುತ್ತವೆ. ಹಾಗಾಗಿ ಎಲ್ಲರೂ 40 ವರ್ಷಗಳ ನಂತರ ತಮ್ಮ ಕಣ್ಣುಗಳನ್ನು ತಪಾಸಣೆ ಮಾಡಿಸಿಕೊಂಡು ದೃಷ್ಟಿದೋಷ ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ವಾಹನ ಚಾಲಕರು ತಮ್ಮ ಕಣ್ಣುಗಳ ತಪಾಸಣೆ ಮಾಡಿಸಿಕೊಂಡು ಅವಶ್ಯವಿದ್ದಲ್ಲ ಕನ್ನಡಕ ಧರಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳನ್ನು ತಡೆಯಬಹುದು. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೋಟಾರು ವಾಹನ ನಿರೀಕ್ಷಕರು, ಕಚೇರಿ ಸಿಬ್ಬಂದಿಗಳು, ಆರೋಗ್ಯ ಇಲಾಖೆಯವರು ಸಾರ್ವಜನಿಕರು ಭಾಗವಹಿಸಿದ್ದರು.

Related Posts

ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

Share this… Facebook Pinterest Twitter Linkedin Whatsappಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26…

You cannot copy content of this page