6

ರಾಜ್ಯ ಮಟ್ಟದ 19 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಕ್ರೀಡಾಕೂಟ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಬ್ಯಾಡಗಿ ಎಸ್.ಜೆ.ಜೆ.ಎಂ. ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನ.26 ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ಯಾಡಗಿ ಪಟ್ಟಣದ ಎಸ್.ಜೆ.ಜೆ.ಎಂ.ತಾಲೂಕು ಕ್ರೀಡಾಂಗಣದಲ್ಲಿ ಜರುಗಲಿದ್ದು, ನ.26 ರಂದು ಸಂಜೆ 6 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ.

ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಶಿಕ್ಷಣ ಸಚಿವರಾದ ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ಘನ ಉಪಸ್ಥಿತಿಯಲ್ಲಿ ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಕ್ರೀಡಾಕೂಟ ಉದ್ಘಾಟನೆ ನೆರವೇರಿಸಲಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಮುಖ್ಯಮಂತ್ರಿಗಳು ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಎಸ್.ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಗೌರವ ಉಪಸ್ಥಿತರಿರುವರು. ಬ್ಯಾಡಗಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ.

  • Related Posts

    ನ.23 ರಂದು ಒಂದು ದಿನದ ರಫ್ತು ಪ್ರೋತ್ಸಾಹಧನ

    Share this… Facebook Pinterest Twitter Linkedin Whatsappಜವಳಿ ವಲಯದ ಸಂಭಾವ್ಯ ರಫ್ತು ಉದ್ದಿಮೆದಾರರಿಗೆ ಒಂದು ದಿನದ ರಫ್ತು ಪ್ರೊತ್ಸಾಹನ ಕಾರ್ಯಗಾರ ನ.23 ರಂದು ಸೋಮುವಾರ ಬೆಳಗ್ಗೆ 10 ಗಂಟೆಗೆ ಹಾವೇರಿ ನಗರದ “ಗುಡ್ಡೆಪ್ಪ ಹಳ್ಳಿಕೇರಿ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜವಳಿ…

    ಉಚಿತ ನೇತ್ರ ತಪಾಸಣಾ ಶಿಬಿರ

    Share this… Facebook Pinterest Twitter Linkedin Whatsappಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಗುರುವಾರ ಪ್ರಾದೇಶಿಕ ಕಚೇರಿಯಲ್ಲಿ ಜರುಗಿತು. ಉದ್ಘಾಟನೆ ನೆರವೇರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಕು.ವಿನಯ ಕಾಟೋಕರ ಅವರು ಮಾತನಾಡಿ, ವಾಹನ ಚಾಲನೆ…

    You cannot copy content of this page